ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಪತ್ರಕರ್ತ ಸುನಿಲ್‌ ಹೆಗ್ಗರವಳ್ಳಿ ನಿಧನ

Last Updated 12 ಜುಲೈ 2021, 13:07 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಪತ್ರಕರ್ತ ಸುನಿಲ್‌ ಹೆಗ್ಗರವಳ್ಳಿ (43) ಹೃದಯಾಘಾತದಿಂದ ಸೋಮವಾರ ನಿಧನರಾದರು.

ಸುನಿಲ್‌ ಅವರಿಗೆ ಮಧ್ಯಾಹ್ನ ಎದೆನೋವು ಕಾಣಿಸಿಕೊಂಡಿತು. ಮೂಡಿಗೆರೆಯ ಆಸ್ಪತ್ರೆಗೆ ಒಯ್ಯಲಾಯಿತು. ಆಸ್ಪತ್ರೆಗೆ ತಲುಪುವಷ್ಟರಲ್ಲೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾಗಿ ಕುಟುಂಬದವರು ತಿಳಿಸಿದರು.

ಅವರಿಗೆ ಅಪ್ಪ, ಅಮ್ಮ, ಪತ್ನಿ, ಪುತ್ರ ಇದ್ದಾರೆ. ಮೂಡಿಗೆರೆ ತಾಲ್ಲೂಕಿನ ಸ್ವಗ್ರಾಮ ಹೆಗ್ಗರವಳ್ಳಿಯಲ್ಲಿ ಮಂಗಳವಾರ ಅಂತ್ಯಕ್ರಿಯೆ ನಡೆಯಲಿದೆ.

ಸುನಿಲ್‌ ಮೂಡಿಗೆರೆಯ ಡಿಎಸ್‌ಬಿಜಿ ಕಾಲೇಜಿನಲ್ಲಿ ಪದವಿ ವಿದ್ಯಾಭ್ಯಾಸ ಮಾಡಿದ್ದರು. ಬೆಂಗಳೂರಿಗೆ ತೆರಳಿ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿ ‘ಹಾಯ್‌ ಬೆಂಗಳೂರ್‌’ ಪತ್ರಿಕೆ ಸೇರಿದ್ದರು. ನಂತರ ಆ ಪತ್ರಿಕೆ ತೊರೆದು ‘ಚಾರ್ಲಿ ಟೈಮ್ಸ್‌’ ಪತ್ರಿಕೆ ಆರಂಭಿಸಿದ್ದರು. ಕೆಲ ದಿನಗಳಿಂದ ಊರಿನಲ್ಲಿ ನೆಲೆಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT