ಚಿಕ್ಕಮಗಳೂರು: ಮಂಡ್ಯದ ನಾಟ್ಯ ವಿದುಷಿ ಮಾನಸ ಸಾರಥ್ಯದಲ್ಲಿ ‘ಕಾಡಿನ ಕೊಳಲು’ ನೃತ್ಯರೂಪಕ ಪ್ರದರ್ಶನ ಫೆ.8ರಂದು ಸಂಜೆ 6ಗಂಟೆಗೆ ನಗರದ ಕುವೆಂಪು ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಲಯನ್ ಮಾಜಿ ಅಧ್ಯಕ್ಷ ಜಿ.ರಮೇಶ್ ತಿಳಿಸಿದರು.

ರಾಷ್ಟ್ರಕವಿ ಕುವೆಂಪು ಕಾವ್ಯ ನೃತ್ಯೋತ್ಸವದ ಪ್ರಯುಕ್ತ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಕುವೆಂಪು ಗೀತೆಗಳನ್ನು ಆಧರಿಸಿ ಜಯಪ್ರಕಾಶಗೌಡ ಅವರ ಮಾರ್ಗದರ್ಶನದಲ್ಲಿ ರೂಪಕ ಸಿದ್ಧವಾಗಿದೆ. ಮಂಡ್ಯದ ಮನೋಜ್ಞ ನೃತ್ಯ ಅಕಾಡೆಮಿಯ 26 ಕಲಾವಿದೆಯರು ನೃತ್ಯ ಪ್ರದರ್ಶನ ನೀಡಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಶೃಂಗೇರಿಯ ಬಿಜಿಎಸ್ ನೃತ್ಯ ನಾಟಕ ಸಂಗೀತ ವಿದ್ಯಾಲಯ, ದೇವೀರಮ್ಮ ದೇವಾಲಯ ವ್ಯವಸ್ಥಾಪನಾ ಸಮಿತಿ, ಸುಗಮ ಸಂಗೀತ ಗಂಗಾ, ಜಿಲ್ಲಾ ಒಕ್ಕಲಿಗರ ಸಂಘ, ಕಲಾ ಸೇವಾ ಸಂಘ, ಕಲ್ಕಟ್ಟೆ ಪುಸ್ತಕದ ಮನೆ, ಲಯನ್ಸ್ ಸಂಸ್ಥೆ ಮತ್ತು ಆಶ್ರಯ ಫೌಂಡೇಷನ್ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಗುಣನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮಕ್ಕಳ ವೈದ್ಯ ಡಾ.ಜೆ.ಪಿ.ಕೃಷ್ಣಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಡ್ಯದ ಸಂಸ್ಕೃತಿ ಚಿಂತಕ ಜಯಪ್ರಕಾಶಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಲಯನ್ ಸಂಸ್ಥೆ ಅಧ್ಯಕ್ಷ ಸಿ.ಎನ್.ಕುಮಾರ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಸಂಯೋಜಕ ಗಣೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.