ಕಡೂರು: ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ನ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಿಂದ ಬಿದ್ದು, ಯುವಕ ಮೃತಪಟ್ಟ ಘಟನೆ ಪಟ್ಟಣದ ಅಂಡರ್ಬ್ರಿಡ್ಜ್ ರಸ್ತೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಸುಭಾಷ್ನಗರದ ನೇಮಾನ್ (20) ಮೃತಪಟ್ಟವರು.

ಎಪಿಎಂಸಿ ಮಾರುಕಟ್ಟೆಗೆ ತರಕಾರಿ ತರಲು ಸ್ನೇಹಿತನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ನೇಮಾನ್, ರಸ್ತೆ ಮಧ್ಯೆ ಕೈಯಿಂದ ಬಿದ್ದ ಹಣವನ್ನು ಎತ್ತಿಕೊಳ್ಳುತ್ತಿದ್ದ ವ್ಯಕ್ತಿಯನ್ನು ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದ ವೇಳೆ ಬೈಕ್ ನಿಯಂತ್ರಣ ತಪ್ಪಿ, ಪಾದಚಾರಿಗೆ ಡಿಕ್ಕಿಯಾಗುವ ಜೊತೆಗೆ ಡಿವೈಡರ್ನಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ನೇಮಾನ್ಗೆ ತಲೆ ಹಾಗೂ ಸೊಂಟಕ್ಕೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಪಾದಚಾರಿ ಶಶಿಧರ್ ಹಾಗೂ ಬೈಕ್ನ ಹಿಂಬದಿ ಸವಾರ ಅಫ್ರೀದಿಗೂ ಗಾಯಗಳಾಗಿವೆ.

ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-126-1353778490

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.