ಕಡೂರು: ದೊಡ್ಡಪಟ್ಟಣಗೆರೆ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.

ನಿವೃತ್ತ ಪಿಎಸ್ಐ ಸುಂದರೇಶ್ ಪಿ.ಆರ್. (86) ಮೃತಪಟ್ಟವರು. ನಿವೃತ್ತಿ ನಂತರ ದೊಡ್ಡಪಟ್ಟಣಗೆರೆಯಲ್ಲಿ ಕೃಷಿಕರಾಗಿ ಜೀವನ ನಡೆಸುತ್ತಿದ್ದರು. ಗುರುವಾರ ಬೆಳಿಗ್ಗೆ ಅವರು, ಗ್ರಾಮದ ಶಾಲೆ ಬಳಿ ಸ್ಕೂಟಿಯಲ್ಲಿ ಮನೆ ಕಡೆ ತೆರಳುತ್ತಿದ್ದಾಗ ಪಂಚೆಹೊಸಳ್ಳಿ ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಮೇಲೆ ಬಿದ್ದು, ತಲೆಗೆ ಪೆಟ್ಟಾಗಿ ರಕ್ತಸ್ರಾವವಾಗಿತ್ತು.

ಸಂಬಂಧಿಕರು ಕಡೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಗಾಯಾಳುವಿನ ಪುತ್ರನ ಕರೆ ಮೇರೆಗೆ ಮೈಸೂರಿಗೆ ಕರೆದುಕೊಂಡು ಹೋಗಿ ಅಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ರಾತ್ರಿ ಸುಂದರೇಶ್ ಮೃತಪಟ್ಟರು. ಪುತ್ರ ರಘುನಂದನ ನೀಡಿದ ದೂರಿನ ಅನ್ವಯ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-126-1040446907

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.