ಕಡೂರು: ‘ಬಕ್ರೀದ್ ಹಾಗೂ ಇನ್ನಿತರ ಹಬ್ಬಗಳ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಗೋವುಗಳಸಾಗಾಣಿಕೆ ಮತ್ತು ಗೋಹತ್ಯೆಯನ್ನು ತಡೆಯಬೇಕು’ ಎಂದು ಒತ್ತಾಯಿಸಿ, ಬಜರಂಗದಳ ಕಡೂರು ತಾಲ್ಲೂಕು ಸಂಯೋಜಕ ಯೋಗೀಶ್ ಪೂಜಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.

ಗೋ ಸಂಪತ್ತನ್ನು ಉಳಿಸುವುದು ಪ್ರತಿ ನಾಗರಿಕನ ಮತ್ತು ಕಾನೂನು ಪಾಲಕರ ಜವಾಬ್ದಾರಿ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಕಡೂರು-ಬೀರೂರು ಪಟ್ಟಣ ಹಾಗೂ ತಾಲ್ಲೂಕು ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕರನ್ನು ಬಲಿ ತೆಗೆದುಕೊಳ್ಳುತ್ತಿರುವ ಮಾದಕ ದ್ರವ್ಯಗಳ (ಗಾಂಜಾ) ಜಾಲದ ವಿರುದ್ಧವೂ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕಡೂರು ವೃತ್ತ ನಿರೀಕ್ಷಕರ ಕಚೇರಿಗೂ ಮನವಿ ಪತ್ರ ಸಲ್ಲಿಸಲಾಯಿತು.

ದರ್ಶನ್, ಶ್ರೀಕಾಂತ್, ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-126-1440408698

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.