ಕಡೂರು: ‘ಕನ್ನಡ ನಾಡು, ನುಡಿಯ ಅಸ್ಮಿತೆಯನ್ನು ಉಳಿಸಿಕೊಂಡು ಬೆಳೆಸಬೇಕಾದ ಅನಿವಾರ್ಯತೆ ಪ್ರತಿಯೊಬ್ಬರದು’ ಎಂದು ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಕೆ.ಎಂ.ರಸ್ತೆಯ ಗಣಪತಿ ಪೆಂಡಾಲ್ ಸಮೀಪ ಬುಧವಾರ ಕನ್ನಡ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಕನ್ನಡ ನಾಡು, ನುಡಿಯ ಬಗ್ಗೆ ಪರಿಷತ್ತು ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಕಡೂರು ಪಟ್ಟಣದಲ್ಲಿ ಭುವನೇಶ್ವರಿಯ ಪ್ರತಿಮೆ ಸ್ಥಾಪನೆಗೊಳ್ಳುತ್ತಿರುವುದು ನಮ್ಮ ತಾಯಿ ಭಾಷೆಯ ಮೇಲಿನ ಅಭಿಮಾನ ಸದಾ ಜಾಗೃತವಾಗಿರಲು ಪೂರಕವಾಗಿದೆ. ಎಲ್ಲಾ ಜನಪ್ರತಿನಿಧಿಗಳು ಈ ಕಾರ್ಯಕ್ಕೆ ಸಹಕಾರ ನೀಡುತ್ತೇವೆ’ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ‘ರಾಜ್ಯದಲ್ಲಿಯೇ ಪ್ರಥಮವಾಗಿ ಪರಿಷತ್ತಿನ ಮೂಲಕ ಕನ್ನಡ ತಾಯಿಯ ಪುತ್ಥಳಿ ಸ್ಥಾಪಿಸುತ್ತಿರುವುದು ಸಂತಸ ತಂದಿದೆ. ನಾಡು ನುಡಿಯ ಸೇವೆಯಲ್ಲಿ ಪರಿಷತ್ತಿನ ಮೂಲಕ ನಿರಂತರವಾಗಿ ತೊಡಗಿಸಿಕೊಳ್ಳುತ್ತೇವೆ’ ಎಂದರು.
ಪರಿಷತ್ತಿನ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ ಸತ್ಯನಾರಾಯಣ, ಸಂಚಾಲಕಿ ಪದ್ಮಾವತಿ ಸೂರಿ ಶ್ರೀನಿವಾಸ್, ತಾಲ್ಲೂಕು ಘಟಕದ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ, ಗೌರವ ಕಾರ್ಯದರ್ಶಿ ಕುಪ್ಪಾಳು ಶಾಂತಮೂರ್ತಿ, ಬಿ.ಚಂದ್ರಶೇಖರ್, ಗೌರವಾಧ್ಯಕ್ಷ ಆರ್.ಜಿ.ಕೃಷ್ಣಸ್ವಾಮಿ, ಬುಕ್ಕಸಾಗರ ರಾಜಶೇಖರ್, ಪುರಸಭಾ ಸದಸ್ಯರಾದ ಮರಗುದ್ದಿ ಮನು, ಶ್ರೀಕಾಂತ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.