ಕಡೂರು: ‘ಶೋಷಿತ ಮಾದಿಗ ಸಮುದಾಯವು ಹೋರಾಟದ ಮೂಲಕವೇ ತನ್ನ ಹಕ್ಕುಗಳನ್ನು ಪಡೆಯಬೇಕು’ ಎಂದು ಕಾಂಗ್ರೆಸ್ ಮುಖಂಡ ಎಚ್. ಆಂಜನೇಯ ಹೇಳಿರು.

ತಾಲ್ಲೂಕಿನ ಮರವಂಜಿ ಗ್ರಾಮದಲ್ಲಿ ನಿರ್ಮಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ನೂತನ ಪ್ರತಿಮೆಯನ್ನು ಸೋಮವಾರ ಅನಾವರಣಗೊಳಿಸಿ ಅವರು ಮಾತನಾಡಿದರು.

‘ದಶಕಗಳ ಹಿಂದೆ ಸಮಾಜವನ್ನು ಬಡತನ ಇತ್ತು. ಎಷ್ಟೋ ಕುಟುಂಬಗಳು ತಿನ್ನಲು ಅನ್ನವಿಲ್ಲದೆ ಹಸಿವಿನಿಂದ ಸತ್ತ ಉದಾಹರಣೆಗಳೂ ಇವೆ. ಬದಲಾದ ಸನ್ನಿವೇಶದಲ್ಲಿ ಸಮಾಜದ ಜನರ ಪರಿಸ್ಥಿತಿ ಸುಧಾರಣೆಯಾಗಿದೆ. ಇನ್ನು ಮುಂದೆ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಡಾ.ಅಂಬೇಡ್ಕರ್ ಅವರ ಆದರ್ಶಗಳನ್ನು ಯುವಕರು ಮೈಗೂಡಿಸಿಕೊಳ್ಳಬೇಕು. ಕುಡಿತದಂತಹ ದುಶ್ಚಟಗಳಿಂದ ಸಮಾಜ ಮುಕ್ತವಾಗಬೇಕು’ ಎಂದು ಸಲಹೆ ನೀಡಿದರು.

ಶಾಸಕ ಕೆ.ಎಸ್.ಆನಂದ್ ಮಾತನಾಡಿ, ಪಟ್ಟಣಗಳಲ್ಲಿ ಮಾತ್ರ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಕಾಣಬಹುದಾಗಿತ್ತು. ಆದರೆ ಇದೇ ಮೊದಲ ಬಾರಿಗೆ ಗ್ರಾಮೀಣ ಭಾಗವಾದ ಮರವಂಜಿಯಲ್ಲಿ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗಿದೆ. ಡಾ. ಅಂಬೇಡ್ಕರ್ ಇಲ್ಲಿನ ಯುವಕರಿಗೆ ಸ್ಫೂರ್ತಿಯ ಸೆಲೆಯಾಗಬೇಕು ಎಂದರು.

ವಿವಿಧತೆಯಿಂದ ಕೂಡಿದ ಭಾರತಕ್ಕೆ ಸಂವಿಧಾನ ರಚಿಸುವುದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ. ಆದರೆ ಅಂಬೇಡ್ಕರ್ ಎಲ್ಲಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನವನ್ನು ಕೊಟ್ಟರು. ಸರ್ಕಾರದ ಭಾಗವಾಗದೇ ಇದ್ದರೂ ಎಲ್ಲರ ಸಹಮತ ಪಡೆದು ಒಳಮೀಸಲಾತಿ ಜಾರಿ ಮಾಡಿಸಿದ ಕೀರ್ತಿ ಎಚ್. ಆಂಜನೇಯ ಅವರಿಗೆ ಸಲ್ಲುತ್ತದೆ ಎಂದರು.

ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ, ಸಂಘಟನೆಯ ಹೆಸರಿನಲ್ಲಿ ದಲಿತ ಸಮುದಾಯಗಳು ಇತರೆ ಸಮುದಾಯಗಳ ಜತೆ ಸಂಘರ್ಷಕ್ಕೆ ಇಳಿಯದೆ, ಜತೆ ಸಹಬಾಳ್ವೆ ನಡೆಸಬೇಕುಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ, ದಲಿತ ಮುಖಂಡ ರಾದ ಪ್ರಮೋದ್, ಶೂದ್ರ ಶ್ರೀನಿವಾಸ್, ಶೋಭ, ಭೋಗಪ್ಪ ಮಾತನಾಡಿದರು. ಮಾದಾರ ಮಹಾಸಭಾದ ತಾಲ್ಲೂಕು ಅಧ್ಯಕ್ಷ ಆರ್.ಜಿ. ಕೃಷ್ಣಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಎಂ.ಕೆ. ರಂಗಪ್ಪ, ನರಸಿಂಹಪ್ಪ ಮತ್ತಿತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-126-1133687073

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.