ಕಡೂರು: ತಾಲ್ಲೂಕಿನ ಯಳಗೊಂಡನಹಳ್ಳಿ, ಯಳ್ಳಂಬಳಸೆ, ವಿಠಲಾಪುರ, ಚಿಕ್ಕನಾಯ್ಕನಹಳ್ಳಿ, ಸಾದರಹಳ್ಳಿ, ಮಲ್ಲಿದೇವಿಹಳ್ಳಿ, ಸೂರಾಪುರ, ಚಿಕ್ಕತಂಗಲಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲಿ ಕೃಷಿ ಪಂಪ್ಸೆಟ್ಗಳ ವಿದ್ಯುತ್ ಪೂರೈಕೆಯಲ್ಲಿ ತೀವ್ರ ಅಡಚಣೆ ಆಗುತ್ತಿರುವುದನ್ನು ಖಂಡಿಸಿ ಗ್ರಾಮಗಳ ರೈತರು ಕಡೂರು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಂದ್ರಶೇಖರ್ ಮತ್ತು ಸುಪ್ರೀತ್, ‘ಕಳೆದ ಎರಡು ತಿಂಗಳಿನಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದೆ. ಸರ್ಕಾರದ ಆದೇಶದಂತೆ ಕೃಷಿ ಉದ್ದೇಶಕ್ಕೆ 7 ಗಂಟೆ 3 ಫೇಸ್ ವಿದ್ಯುತ್ ನೀಡಬೇಕು. ಆದರೆ 2-3 ಗಂಟೆಯೂ ವಿದ್ಯುತ್ ನೀಡುತ್ತಿಲ್ಲ. ಬಿರು ಬೇಸಗೆಯ ಸಂದರ್ಭದಲ್ಲಿ ನಾವು ನಮ್ಮ ತೋಟ ಅಥವಾ ಬೆಳೆಗಳನ್ನು ರಕ್ಷಿಸಿಕೊಳ್ಳುವುದಾದರೂ ಹೇಗೆ? ರೈತರು ಕರೆ ಮಾಡಿದರೆ ಎಂಜಿನಿಯರ್ಗಳಾಗಲಿ, ಲೈನ್ಮ್ಯಾನ್ಗಳಾಗಲೀ ಕರೆ ಸ್ವೀಕರಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಕಾರ್ಯಪಾಲಕ ಎಂಜಿನಿಯರ್ ಬರಬೇಕು ಎಂದು ಆಗ್ರಹಿಸಿ ಕಚೇರಿಯ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಎಂಜಿನಿಯರ್ಗಳು ಶಿವಮೊಗ್ಗದ ವಿಭಾಗೀಯ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಭಾಗವಹಿಸಲು ಹೋಗಿದ್ದಾರೆ. ಇಂದು ಅಧಿಕಾರಿಗಳು ಯಾರೂ ಸಿಗುವುದಿಲ್ಲ. ನಿಮ್ಮ ಬೇಡಿಕೆಗಳನ್ನು ಅವರ ಗಮನಕ್ಕೆ ತಂದಿದ್ದು, ಮಂಗಳವಾರ ಕಚೇರಿಗೆ ಬರುವಂತೆ ತಿಳಿಸಿದ್ದಾರೆ. ತಾವು ಮಂಗಳವಾರ ಬಂದರೆ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯಬಹುದು ಎಂದು ಜೆಇ ಬಸವರಾಜು ಪ್ರತಿಭಟನಾ ನಿರತರನ್ನು ಭೇಟಿ ನೀಡಿ ತಿಳಿಸಿದರು. ನಂತರ ರೈತರು ಸ್ಥಳದಿಂದ ತೆರಳಿದರು.

ಯಳಗೊಂಡನಹಳ್ಳಿಯ ತಿಪ್ಪೇಶ್, ಪ್ರವೀಣ್, ಮಧು, ಕಲ್ಲೇಶ್ ಮತ್ತು ಸಂತೋಷ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-126-208798667

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.