ಕಡೂರು: ಸರ್ಕಾರದ ವಿವಿಧ ಯೋಜನೆಗಳಡಿ ಸಬ್ಸಿಡಿ ಸೌಲಭ್ಯಗಳನ್ನು ಕೊಡಿಸುವುದಾಗಿ ನಂಬಿಸಿ ರೈತರಿಂದ ಕೋಟ್ಯಂತರ ರೂಪಾಯಿ ವಂಚಿಸಿರುವ ಬಗ್ಗೆ ಗಂಗಾಧರ ಗೌಡ ಕೆ. ಎಂಬುವವರ ವಿರುದ್ಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಯಗಟಿ ಹೋಬಳಿಯ ವೈ. ಮಲ್ಲಾಪುರ ಗ್ರಾಮದ ಮಹೇಶ್ವರಪ್ಪ ಎಂಬುವರು ದೂರು ನೀಡಿದ್ದು, 2024ರಿಂದ ಸುಮಾರು 80 ರೈತರಿಂದ ಒಟ್ಟು ₹1.34 ಕೋಟಿ ಹಣ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ.

ಮಹೇಶ್ವರಪ್ಪ ಅವರು 2024ರ ಜೂನ್ನಲ್ಲಿ ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದಾಗ ವಿಧಾನಸೌಧದ ಬಳಿ ಗಂಗಾಧರಗೌಡ ಕೆ. ಪರಿಚಯವಾಗಿದ್ದರು. ರೈತರು ₹50 ಸಾವಿರ ಪಾವತಿಸಿದರೆ ₹3 ಲಕ್ಷ ಸಬ್ಸಿಡಿಯಲ್ಲಿ ಟ್ರ್ಯಾಕ್ಟರ್ ಕೊಡಿಸುವುದಾಗಿ ಹಾಗೂ ಕೃಷಿ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಸಬ್ಸಿಡಿ ದರದಲ್ಲಿ ಒದಗಿಸುವುದಾಗಿ ಭರವಸೆ ನೀಡಿದ್ದರು.

ಅವರ ಮಾತು ನಂಬಿದ ಮಹೇಶ್ವರಪ್ಪ, ಸ್ನೇಹಿತರಾದ ಕಲ್ಲೇಶ್ ಮತ್ತು ಚಂದ್ರಶೇಖರ್ ಸೇರಿ 80 ರೈತರಿಂದ ಹಣ ಪಡೆದು, ಒಟ್ಟಾರೆ ₹1.34 ಕೋಟಿ ಪಾವತಿಸಿದ್ದು, ಅಗತ್ಯ ದಾಖಲೆಗಳನ್ನು ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗಿತ್ತು.

ಅನಂತರ ಸೌಲಭ್ಯಗಳನ್ನು ಒದಗಿಸುವಂತೆ ಕೇಳಿದಾಗ, ‘ಬಜೆಟ್ ಅಧಿವೇಶನ ನಡೆಯುತ್ತಿದೆ’, ‘ಬೆಳಗಾವಿ ಅಧಿವೇಶನ ಮುಗಿದ ಬಳಿಕ ಫೈಲ್ ಪಾಸ್ ಆಗುತ್ತದೆ’ ಎಂಬಂತೆ ವಿವಿಧ ಕಾರಣಗಳನ್ನು ನೀಡುತ್ತ ಕಾಲಹರಣ ಮಾಡುತ್ತಿದ್ದರೆಂದು ಆರೋಪಿಸಲಾಗಿದೆ. ಇತ್ತೀಚೆಗೆ ಅವರು ಸಂಪರ್ಕಕ್ಕೆ ಸಿಗದ ಕಾರಣ ವಿಚಾರಿಸಿದಾಗ, ಇತರ ರೈತರಿಗೂ ಇದೇ ರೀತಿ ಮೋಸ ಮಾಡಿರುವುದು ತಿಳಿದುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ವಂಚನೆಗೊಳಗಾದ ರೈತರಿಗೆ ನ್ಯಾಯ ದೊರಕಿಸಿ ಹಣವನ್ನು ವಾಪಸ್ ಕೊಡಿಸಬೇಕು ಎಂದು ಮನವಿ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-126-404683002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.