ಕಡೂರು: ಪಟ್ಟಣದ ಸಮೀಪದ ಹೈವೇ ಶಾಲೆಯಲ್ಲಿ 2025- 26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಗೆ ಶಾಲೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷ ಬಿ. ಶಿವಕುಮಾರ್, 2025-26ನೇ ಸಾಲಿನಲ್ಲಿ ಉತ್ತಮ ಫಲಿತಾಂಶ ಬಂದಿದ್ದು 600ಕ್ಕೂ ಹೆಚ್ಚಿನ ಅಂಕ ಪಡೆದ 12 ವಿದ್ಯಾರ್ಥಿಗಳಿಗೆ ನಗದು ನೀಡಿ ಗೌರವಿಸಲಾಗುತ್ತಿದೆ. ನಿಮ್ಮ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ನೀವು ಇನ್ನೂ ಹೆಚ್ಚು ಸಾಧನೆ ಮಾಡಿ, ಉತ್ತಮ ವ್ಯಾಸಂಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ಹಾರೈಸಿದರು.

ತಾಲ್ಲೂಕಿಗೆ ಪ್ರಥಮ ಸ್ಥಾನಗಳಿಸಿದ್ದ ಸನ್ನಿಧಿ.ವಿ (618) ಅವರಿಗೆ ₹10 ಸಾವಿರ ನಗದು ಪುರಸ್ಕಾರ ನೀಡಲಾಯಿತು, ಶಾಲೆಗೆ ದ್ವಿತೀಯ ಸ್ಥಾನ ಪಡೆದ ಪೃಥ್ವಿ ಕೆ. ಪ್ರಶಾಂತ್ (617) ಅವರಿಗೆ ₹5 ಸಾವಿರ, ತೃತೀಯ ಸ್ಥಾನ ಪಡೆದ ನಿಶಾಂತ್ ಭಾರ್ಗವ್ (615) ₹3 ಸಾವಿರ ಉಳಿದ 9 ವಿದ್ಯಾರ್ಥಿಗಳಿಗೆ ತಲಾ ₹2 ಸಾವಿರ ನಗದು ಪುರಸ್ಕಾರ ನೀಡಲಾಯಿತು.

ಕಡೂರು ಶಿಕ್ಷಣ ಸಮನ್ವಯಾಧಿಕಾರಿ ಕೆ.ಡಿ. ನಾಗರಾಜ್ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕ ಗಣೇಶ್ ಸಾಲಿಯಾನ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು. ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-126-122921037

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.