ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ಯ ಪಕ್ಷದವರಿಗೆ ದುಡಿಯುವ ಅನಿವಾರ್ಯತೆ ನಮಗಿಲ್ಲ: ಕೆ.ಎಸ್.ಆನಂದ್

Published 6 ಏಪ್ರಿಲ್ 2024, 13:20 IST
Last Updated 6 ಏಪ್ರಿಲ್ 2024, 13:20 IST
ಅಕ್ಷರ ಗಾತ್ರ

ಕಡೂರು: ‘ಅನ್ಯ ಪಕ್ಷದವರಿಗೆ ದುಡಿಯಬೇಕಾದ ಅನಿವಾರ್ಯತೆ ನಮಗಿಲ್ಲ. ನಮ್ಮದೇ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಶ್ರಮಿಸೋಣ’ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಕಡೂರಿನ ಟಿಡಿಎಸ್ ಸಭಾಂಗಣದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಬೂತ್ ಮಟ್ಟದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖರು ಪ್ರಚಾರಕ್ಕೆ ಬರಲಿದ್ದಾರೆ. ಆದ್ದರಿಂದ ಬೂತ್ ಮಟ್ಟದ ಕಾರ್ಯಕರ್ತರು ನಮ್ಮ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರಿಗೆ ಹೆಚ್ಚು ಮತ ಸಿಗುವಂತೆ ಶ್ರಮಿಸಬೇಕು’ ಎಂದರು.

ಕಡೂರು- ಬೀರೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆಸಂದಿ ಕಲ್ಲೇಶ್, ಬಾಸೂರು ಚಂದ್ರಮೌಳಿ, ಪುರಸಭೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಸದಸ್ಯರಾದ ಈರಳ್ಳಿ ರಮೇಶ್, ಹಾಲಮ್ಮ, ಸಯ್ಯದ್ ಯಾಸೀನ್, ಮುಖಂಡರಾದ ಶರತ್ ಕೃಷ್ಣಮೂರ್ತಿ, ಪಂಚನಹಳ್ಳಿ ಪ್ರಸನ್ನ, ಜಿ.ಪಿ.ಪ್ರಭುಕುಮಾರ್, ನರಸಿಂಹಪ್ಪ, ಗುಮ್ಮನಹಳ್ಳಿ ಅಶೋಕ್, ಕರಿಬಡ್ಡೆ ಶ್ರೀನಿವಾಸ್, ಕೆ.ಜಿ.ಶ್ರೀನಿವಾಸ ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT