ಕಡೂರು (ಚಿಕ್ಕಮಗಳೂರು): ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಕಂದಾಯ ಇಲಾಖೆಯ ಸಭೆಯಲ್ಲಿ ಶಾಸಕರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರರ ಪಕ್ಕ ಕುಳಿತು ಸಭೆ ನಡೆಸಿದ್ದಾರೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ರವಿಕುಮಾರ್ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ‘ಈ ವಿಷಯ ನನ್ನ ಗಮನಕ್ಕೆ ಬಂದಿದೆ. ಘಟನೆಯ ಕುರಿತು ವರದಿ ನೀಡುವಂತೆ ಕಡೂರು ತಹಶೀಲ್ದಾರ್ಗೆ ಸೂಚಿಸಿದ್ದೇನೆ. ಅವರು ವರದಿ ನೀಡಿದ ಬಳಿಕ ಸೂಕ್ತ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಕಂದಾಯ ಗ್ರಾಮ, ಉಪಗ್ರಾಮಗಳ ರಚನೆ ಬಗ್ಗೆ ಮಾರ್ಚ್ 16ರೊಳಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕಿದ್ದು, ಆ ಕುರಿತು ಎಡಿಎಲ್ಆರ್, ಉಪ ತಹಶೀಲ್ದಾರ್, ಕಂದಾಯ ಅಧಿಕಾರಿಗಳು, ಪಿಡಿಒಗಳ ಸಭೆಯನ್ನು ಗುರುವಾರ ಶಾಸಕ ಕೆ.ಎಸ್. ಆನಂದ್ ಅಧ್ಯಕ್ಷತೆಯಲ್ಲಿ ಕರೆಯಲಾಗಿತ್ತು.

ಶಾಸಕರು ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಕಾರಣ ಸಭೆಗೆ ಹಾಜರಾಗಿರಲಿಲ್ಲ. ಆಗ ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ, ತಾ.ಪಂ ಇಒ ಸಿ.ಆರ್. ಪ್ರವೀಣ್ ಮತ್ತು ಆರ್ಎಫ್ಒ ಎನ್.ಆರ್. ಹರೀಶ್ ಇದ್ದ ವೇದಿಕೆಯಲ್ಲಿ ಮಂಜುನಾಥ್ ತಹಶೀಲ್ದಾರ್ ಪಕ್ಕವೇ ಕುಳಿತು ಸಭೆಯಲ್ಲಿ ಮಾಹಿತಿ ಪಡೆದಿದ್ದಾರೆ.

‘ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರತಿರೋಧ ತೋರಿಸದೆ ಕರ್ತವ್ಯಲೋಪ ಎಸಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯಗಳು ಹರಿದಾಡುತ್ತಿವೆ. ಜಿಲ್ಲಾಧಿಕಾರಿ ಸೂಕ್ತಕ್ರಮ ವಹಿಸಬೇಕು. ಇಲ್ಲವಾದರೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಟಾರಿಯಾ ಅವರಿಗೆ ದೂರು ಸಲ್ಲಿಸಲಾಗುವುದು’ ಎಂದು ರವಿಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.