ಕಡೂರು: ಯಗಟಿ ಹೋಬಳಿ ನಾಗಗೊಂಡನಹಳ್ಳಿಯಿಂದ ಸಮೀಪದ ಜಕ್ಕನಹಳ್ಳಿ ಕ್ರಾಸ್ನಲ್ಲಿರುವ ಜಮೀನಿಗೆ ಬೀರೂರು- ಯಗಟಿ ರಸ್ತೆಯಲ್ಲಿ ಚಲಿಸುತ್ತಿದ್ದ ಮೊಪೆಡ್ಗೆ ಬಿಸಿಲೆರೆಯಿಂದ ಬೀರೂರು ಕಡೆ ತೆರಳುತ್ತಿದ್ದ ಬೊಲೆರೊ ಪಿಕಪ್ ವಾಹನ ಡಿಕ್ಕಿಯಾಗಿ, ಮೊಪೆಡ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.

ನಾಗಗೊಂಡನಹಳ್ಳಿಯ ಕೃಷಿಕ ಚಂದ್ರಪ್ಪ (41) ಮೃತಪಟ್ಟವರು. ಸಹ ಸವಾರ ಅಭಿಷೇಕ್ ಎಂಬುವರಿಗೂ ಗಾಯವಾಗಿದ್ದು, ಪಿಕಪ್ ವಾಹನ ಚಾಲಕ ಗಾಯಾಳುಗಳನ್ನು ಬೀರೂರು ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿದ್ದರಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿನ ವೈದ್ಯರ ಸಲಹೆಯಂತೆ ಶಿವಮೊಗ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುವಾಗ ಚಂದ್ರಪ್ಪ ಮೃತಪಟ್ಟಿದ್ದರು. ಅಭಿಷೇಕ್ ನೀಡಿದ ದೂರಿನ ಅನ್ವಯ ಯಗಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-126-923064795

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.