ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡೂರಿನ ಯೋಧ ಜಮ್ಮುವಿನಲ್ಲಿ ನಿಧನ

Last Updated 7 ನವೆಂಬರ್ 2021, 3:24 IST
ಅಕ್ಷರ ಗಾತ್ರ

ಕಡೂರು: ಗಡಿಭದ್ರತಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಾಲ್ಲೂಕಿನ ಬಿಳವಾಲ ಗ್ರಾಮದ ಬಿ.ಕೆ‌‌.ಶೇಷಪ್ಪ(44) ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಜಮ್ಮುವಿನಲ್ಲಿ ನಡೆದ ಅವಘಡದಲ್ಲಿ ನಿಧನರಾಗಿದ್ದಾರೆ.

‌‌ಕಡೂರು ತಾಲ್ಲೂಕಿನ ಬಿಳವಾಲ ಗ್ರಾಮದ ಕೇಶವಪ್ಪ ಮತ್ತು ತಾಯಿ ಮಾಳಮ್ಮ ಅವರ ಎರಡನೇ ಮಗ ಶೇಷಪ್ಪ ಅವರಿಗೆ ಪತ್ನಿ ಮತ್ತು ಎರಡು ಮಕ್ಕಳು ಇದ್ದಾರೆ.

ಇಪ್ಪತ್ತು ವರ್ಷಗಳಿಂದ ಬಿಎಸ್ಎಫ್ ಮೆಕ್ಯಾನಿಕಲ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಕೆ. ಶೇಷಪ್ಪ ಅವರು ನಾಲ್ಕು ದಿನಗಳ ಹಿಂದೆ ವಾಹನ ರಿಪೇರಿ ಕೆಲಸ ಮಾಡುವ ವೇಳೆಯಲ್ಲಿ ಜಾಕ್ ಸ್ಲಿಪ್ ಆಗಿ ವಾಹನ ಮೇಲೆ ಬಿದ್ದು ಅವರ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿತ್ತು. ಕೋಮಾಗೆ ಜಾರಿದ್ ಅವರಿಗೆ ವೈಷ್ಣೋದೇವಿ ಬಳಿಯ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವಘಡವಾದ ಸುದ್ದಿ ತಿಳಿದ ಕೂಡಲೇ ಬಿಳವಾಲದಲ್ಲಿದ್ದ ಅವರ ಹಿರಿಯ ಸಹೋದರ ಪ್ರಕಾಶ್ ಜಮ್ಮುವಿಗೆ ತೆರಳಿದ್ದರು.

ಶೇಷಪ್ಪ ಅವರ ಆರೋಗ್ಯ ಚೇತರಿಕೆಗಾಗಿ ಗ್ರಾಮಸ್ಥರು, ಸ್ನೇಹಿತರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಅವರ ನಿಧನದ ಸುದ್ದಿಯಿಂದ ಗ್ರಾಮದಲ್ಲಿ ಸ್ಮಶಾನ‌ಮೌನ ಆವರಿಸಿದೆ.

ಶೇಷಪ್ಪ ಅವರ ಪಾರ್ಥಿವ ಶರೀರ ಭಾನುವಾರ ವಿಮಾನದ ಮೂಲಕ ಬೆಂಗಳೂರಿಗೆ ತರಲಾಗುತ್ತಿದ್ದು, ಸಂಜೆ ವೇಳೆಗೆ ಸ್ವಗ್ರಾಮಕ್ಕೆ ಬರುವ ನಿರೀಕ್ಷೆಯಿದೆ. ಬಿಳವಾಲದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT