ಕಡೂರು: ಇಲ್ಲಿನ ರೈಲು ನಿಲ್ದಾಣದಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 2 ಕೆ.ಜಿ.ಗಾಂಜಾ ವಶಪಡಿಸಿಕೊಂಡಿದ್ದಾರೆ ಎಂದು ಕಡೂರು ಅಬಕಾರಿ ನಿರೀಕ್ಷಕ ಸಂದೀಪ್ ಎಲ್.ಸಿ. ತಿಳಿಸಿದ್ದಾರೆ.

ಟಾಟಾ ನಗರದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಶನಿವಾರ ದಾಳಿ ನಡೆಸಲಾಗಿತ್ತು. ಆರೋಪಿ ತಪ್ಪಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ದಾಳಿಯಲ್ಲಿ ಆರ್ಪಿಎಫ್ ಮೈಸೂರಿನ ಆನಂದ್, ಸಿಬ್ಬಂದಿ ಮಂಜುಳಾ, ಕುಮಾರ್, ಕಿರಣ್ ಗೃಹರಕ್ಷಕ ದಳದವರು ಭಾಗವಹಿಸಿದ್ದರು.

ಪಟ್ಟಣದಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ವೀರಭದ್ರೇಶ್ವರ ದೇವಾಲಯದ ಬಳಿ ಗಾಂಜಾ ಸೇವಿಸುತ್ತಿದ್ದಾಗ ಧನುಷ್ ಎಂಬ ಯುವಕನನ್ನು ವಶಕ್ಕೆ ಪಡೆದು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ. ಆತನ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಅನ್ವಯ ದೂರು ದಾಖಲಾಗಿದೆ. ದಾಳಿಯಲ್ಲಿ ಕಡೂರು ಅಬಕಾರಿ ನಿರೀಕ್ಷಕ ಎಲ್.ಸಿ. ಸಂದೀಪ್, ಅಬಕಾರಿ ಉಪ ನಿರೀಕ್ಷಕ ಮಡಿವಾಳಪ್ಪ, ಎರ್ರಪ್ಪ, ಮುಖ್ಯ ಸಿಬ್ಬಂದಿ ಮಂಜುಳಾ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-918615014

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.