ಕಡೂರು: ಕಡೂರಿನಿಂದ ಚಿಕ್ಕಂಗಳ ಸಮೀಪದ ಅಂದೇನಹಳ್ಳಿಗೆ ತೆರಳುತ್ತಿದ್ದ ಚೇತನ್ (38) ಎಂಬುವರು ಬೈಕ್ನಿಂದ ಬಿದ್ದು ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ.

ಚೇತನ್ ಅವರು, ಕಡೂರಿನಿಂದ ಅಂದೇನಹಳ್ಳಿಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕೆ. ಹೊಸಳ್ಳಿ ಗ್ರಾಮದ ಸೇತುವೆ ಬಳಿ ನಿಂತಿದ್ದ ಮತ್ತೊಂದು ಸ್ಕೂಟರ್ಗೆ ಡಿಕ್ಕಿಹೊಡೆದ ಪರಿಣಾಮ, ಬೈಕ್ ಸಮೇತ ರಸ್ತೆ ಮೇಲೆ ಬಿದ್ದು ತಲೆ, ಮುಖ ಮತ್ತು ಎದೆಯ ಭಾಗಕ್ಕೆ ಪೆಟ್ಟು ಬಿದ್ದಿತ್ತು. ಪರಿಚಯದವರು ಗಾಯಾಳುವನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದು, ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದರು.

ಮೃತನ ಸಹೋದರ ನೀಡಿದ ದೂರಿನ ಅನ್ವಯ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-126-1243433121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.