ಕಡೂರು: ತಾಲ್ಲೂಕಿನ 9ನೇ ಮೈಲಿಕಲ್ಲಿನ ಬಳಿಯ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ.

ಛತ್ತೀಸ್ಘಡ ಮೂಲದ ಜಲಮಾತಿ (50) ಮೃತಪಟ್ಟವರು.

ಬುಧವಾರ ರಾತ್ರಿ ಕೆಲಸ ಮುಗಿಸಿ ಫ್ಯಾಕ್ಟರಿ ಆವರಣದಲ್ಲಿರುವ ಮನೆಯಲ್ಲಿ ಮಲಗಿದ್ದಾಗ ಹಾವು ಕಚ್ಚಿದೆ. ತಕ್ಷಣ ಅವರನ್ನು ಕಡೂರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ಒಯ್ಯುವಂತೆ ಸೂಚಿಸಿದ್ದರು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಿಗ್ಗೆ ಮೃತಪಟ್ಟರು. ಹಾಸನದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಿದ್ದು, ಮೃತ ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಸಿಂಗಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-126-848610391

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.