ಕಡೂರು: ಕಡೂರು-ಎಮ್ಮೆದೊಡ್ಡಿ ರಸ್ತೆಯ ಚಿಕ್ಕಂಗಳ ಗ್ರಾಮದಲ್ಲಿ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಂಗಳದ ಶೇಖರಪ್ಪ (58) ಮೃತಪಟ್ಟವರು. ಗ್ರಾಮದ ಕರಿಯಮ್ಮ ದೇವಾಲಯದ ಬಳಿ ಗುರುವಾರ ರಾತ್ರಿ (ಮಾ.19) ಶೇಖರಪ್ಪ ನಡೆದು ಹೋಗುತ್ತಿರುವಾಗ ಕಡೂರು ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಲೆ ಮತ್ತು ಕಾಲುಗಳಿಗೆ ತೀವ್ರ ಪೆಟ್ಟು ಬಿದ್ದಿತ್ತು. ಬೈಕ್ ಓಡಿಸುತ್ತಿದ್ದ ಹರಳಘಟ್ಟದ ಮನ್ದೀಪ್ ಎಂಬ ಯುವಕ ಕೂಡ ಗಾಯಗೊಂಡಿದ್ದರು. ಗಾಯಾಳು ಶೇಖರಪ್ಪ ಅವರನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಮತ್ತಷ್ಟು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಮಾರ್ಗ ಮಧ್ಯೆ ಮೃತಪಟ್ಟರು.

ಮೃತರ ಪುತ್ರ ರಕ್ಷಿತ್ ನೀಡಿದ ದೂರಿನ ಅನ್ವಯ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-126-1848554089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.