ಕಡೂರು: ತಾಲ್ಲೂಕಿನಲ್ಲಿ ಪ್ರತ್ಯೇಕವಾಗಿ ನಡೆದ ಎರಡು ಅಪಘಾತ ಪ್ರಕರಣಗಳಲ್ಲಿ ಬುಧವಾರ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಕಡೂರು-ಚಿಕ್ಕಮಗಳೂರು ಹೆದ್ದಾರಿ 173ರ ಚನ್ನಾಪುರ ಗೇಟ್ ಬಳಿ ಮಂಗಳವಾರ ರಾತ್ರಿ ವೇಗವಾಗಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಚಾಲಕ, ಮೂಡಿಗೆರೆ ತಾಲ್ಲೂಕು ಬಕ್ಕಿ ಗ್ರಾಮದ ತಿಮ್ಮರಾಜು (51) ಅವರಿಗೆ ತೀವ್ರ ಗಾಯಗಳಾಗಿದ್ದವು. ಪಾದಚಾರಿಗಳು ಉಪಚರಿಸಿ ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಆಸ್ಪತ್ರೆ, ಬಳಿಕ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಬುಧವಾರ ಮೃತಪಟ್ಟಿದ್ದಾರೆ.

ಮೃತರ ಪತ್ನಿ ನೀಡಿದ ದೂರಿನ ಅನ್ವಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಕಡೂರು ತಾಲ್ಲೂಕಿನ ಜಿ.ಕೊಪ್ಪಲು ಗ್ರಾಮದ ಲೋಕೇಶ್ ಜಿ.(46) ಅವರಿಗೆ ನಗರದ ಹೊರವಲಯದ ಹೆದ್ದಾರಿ ಬಳಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವೇಗದ ರಭಸಕ್ಕೆ ಕಾರು ಕೂಡ ರಸ್ತೆವಿಭಜಕ ದಾಟಿ ಬಿದ್ದಿದೆ. ಮೃತರ ಪತ್ನಿ ನೀಡಿದ ದೂರಿನ ಅನುಸಾರ ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-126-449633413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.