ಕಡೂರು: ‘ಯಗಟಿ ಹೋಬಳಿಯ ಪುರ ಪಂಚಾಯಿತಿ ವ್ಯಾಪ್ತಿಯ ಪಿ. ಕೋಡಿಹಳ್ಳಿ ಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ಭೂಮಿ ಖರೀದಿಸಿ ಆಶ್ರಯ ನಿವೇಶನ ನೀಡಲು ಮುಂದಾಗಿದ್ದು, ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡಬೇಕು’ ಎಂದು ಗ್ರಾಮಸ್ಥರು ಶಾಸಕ ಕೆ.ಎಸ್.ಆನಂದ್ ಅವರನ್ನು ನಿವೇಶನರಹಿತರು ಒತ್ತಾಯಿಸಿದರು.

ತಾಲ್ಲೂಕಿನ ಪುರ ಗ್ರಾಮ ಪಂಚಾಯಿತಿಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ 24ನೇ ಜನಸಂಪರ್ಕ ಸಭೆಯಲ್ಲಿ ನಿವೇಶನ ರಹಿತರು ಆಶ್ರಯ ಕಲ್ಪಿಸುವಂತೆ ಆಗ್ರಹಿಸಿದರು.

ಗ್ರಾಮಸ್ಥರ ಕೋರಿಕೆಗೆ ಪ್ರತಿಕ್ರಿಯಿಸಿದ ಶಾಸಕ ಆನಂದ್, ಗ್ರಾಮ ಸಭೆ ಕರೆದು ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ನೀಡಿ ಎಂದು ತಾಲ್ಲೂಕು ಪಂಚಾಯಿತಿ ಇಒಗೆ ಸೂಚಿಸಿದರು. ಗ್ರಾಮದ ಖಾಸಗಿ ಸಂಸ್ಥೆಯವರು ಕೂಡ ನಿವೇಶನ ಕೇಳಿದ್ದು, ನಿಯಮದಡಿ ಅವರಿಗೆ ಹಂಚಿಕೆ ಮಾಡಲು ಬರುವುದಿಲ್ಲ ಎಂದು ಇಒ ಪ್ರವೀಣ್ ತಿಳಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ವಾಟರ್ಮನ್ಗಳು ಮಾಸಿಕ ₹16 ಸಾವಿರ ವೇತನ ಪಡೆಯುತ್ತಿದ್ದು, ವಾರ್ಷಿಕ ಆದಾಯ ₹1.20 ಲಕ್ಷ ಮೀರುವುದರಿಂದ ನಮ್ಮ ಬಿಪಿಎಲ್ ಕಾರ್ಡ್ ರದ್ದಾಗಿವೆ. ಇದರಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗುತ್ತದೆ. ಇದನ್ನು ಸರಿಪಡಿಸಿ ಬಿಪಿಎಲ್ ಕಾರ್ಡನ್ನು ಪುನಃ ನೀಡಿ ಎಂದು ಪುರ ಪಂಚಾಯಿತಿಯ ಸಿಬ್ಬಂದಿ ಅಶ್ವಿನಿ ಶಾಸಕರಲ್ಲಿ ಮನವಿ ಮಾಡಿದರು.

ಇದು ರಾಜ್ಯ ಮಟ್ಟದ ಸಮಸ್ಯೆಯಾಗಿದ್ದು, ಸರ್ಕಾರದ ಹಂತದಲ್ಲಿ ಚರ್ಚಿಸಿ, ಬಗೆಹರಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಪುರ ಪಂಚಾಯಿತಿ ವ್ಯಾಪ್ತಿಯಲ್ಲಿ 340 ಆಸ್ತಿಗಳಿಗೆ ಇ-ಸ್ವತ್ತು ನೀಡಿಲ್ಲ ಎಂಬ ಗ್ರಾಮಸ್ಥರ ದೂರಿಗೆ ಉತ್ತರಿಸಿದ ಇಒ, ಸಮಸ್ಯೆ ಇರುವುದರಿಂದ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ಇ-ಸ್ವತ್ತು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಲಕ್ಷ್ಮಿಪುರ, ರಾಂಪುರ ಸೇರಿದಂತೆ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಗ್ರಾಮಸ್ಥರು ಮನವಿ ಮಾಡಿದರು. ಕೂಡಲೇ ಸಮಸ್ಯೆ ಬಗೆಹರಿಸಬೇಕು. ಕೊಳವೆ ಬಾವಿ ಕೊರೆಯಿಸಲು ಸಾಧ್ಯವಾದರೆ ಕೊರೆಸಿ ನೀರು ನೀಡಿ ಎಂದು ಶಾಸಕರು ಸಂಬಂಧಿಸಿದ ಎಂಜಿನಿಯರ್ಗೆ ಸೂಚಿಸಿದರು.

‘ಪುರ ಗ್ರಾಮದಿಂದ ಚಿಕ್ಕಬಳ್ಳೆಕೆರೆಗೆ ತೆರಳಲು ಸುಮಾರು ₹5 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಪಿ.ಕೋಡಿಹಳ್ಳಿಯ ಸಮುದಾಯ ಭವನಕ್ಕೆ ₹35 ಲಕ್ಷ ನೀಡಲಾಗಿದೆ. ಕೋಡಿಹಳ್ಳಿ– ಪುರ ಗ್ರಾಮಕ್ಕೆ ₹65 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದೆ. ಆರೋಗ್ಯ ಕೇಂದ್ರದಲ್ಲಿ ದಾದಿಯರ ಕೊಠಡಿಗೆ ₹13 ಲಕ್ಷ, ಅಂಗನವಾಡಿ ಕಟ್ಟಡಕ್ಕೆ ₹2 ಲಕ್ಷ, ದೊಣ್ಣೆಕೋರನಹಳ್ಳಿಯ ಕಲ್ಯಾಣಿ ದುರಸ್ತಿಗೆ ₹12 ಲಕ್ಷ ಅನುದಾನ ನೀಡಿದ್ದು, ಮುಂದಿನ 2 ವರ್ಷದಲ್ಲಿ ಇನ್ನಷ್ಟು ಅನುದಾನ ನೀಡಲಾಗುವುದು’ ಎಂದು ಶಾಸಕರು ಭರವಸೆ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಸಿ.ಎಸ್. ಪೂರ್ಣಿಮಾ, ಪುರ ಗ್ರಾ.ಪಂ.ಆಡಳಿತಾಧಿಕಾರಿ ಜಯದೇವಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ದೇವರಾಜ್, ದೊಣ್ಣೆಕೋರನಹಳ್ಳಿ ಉಮೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಶಕುಂತಲ, ಈಶ್ವರಪ್ಪ, ನಾಗಮ್ಮ, ರೇಣುಕ ಉಮೇಶ್, ಯಗಟಿಪುರ ಪ್ರಸನ್ನ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-126-1300565841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.