ಕಡೂರು: ಬಂಡಿಕೊಪ್ಪಲು ಗ್ರಾಮದಿಂದ ಸಖರಾಯಪಟ್ಟಣ ವ್ಯಾಪ್ತಿಯ ಕಂಚುಗಾರನಹಳ್ಳಿಗೆ ಬೈಕ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ನಾಗೇನಹಳ್ಳಿ ಸಮೀಪ ರಸ್ತೆಗೆ ಅಡ್ಡ ಬಂದ ನಾಯಿಗೆ ಡಿಕ್ಕಿಯಾಗುವುದನ್ನು ತಪ್ಪಿಸುವ ವೇಳೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

ಬಂಡಿಕೊಪ್ಪಲಿನಲ್ಲಿ ವಾಸವಿದ್ದ ನಿವೃತ್ತ ಸೈನಿಕ ನಟೇಶ್ (46) ಮೃತಪಟ್ಟವರು. ಕಂಚುಗಾರಹಳ್ಳಿಯಲ್ಲಿ ಗುರುವಾರ ನಟೇಶ್ ಅವರ ತಂದೆ ಮೃತಪಟ್ಟಿದ್ದು, ಈ ಸಂಬಂಧ ಗ್ರಾಮಕ್ಕೆ ತೆರಳುತ್ತಿದ್ದಾಗ ಅವಘಡ ನಡೆದಿದೆ. ಗಾಯಗೊಂಡಿದ್ದ ಅವರನ್ನು ಚಿಕ್ಕಮಗಳೂರು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ರಾತ್ರಿ ಮೃತಪಟ್ಟರು. ಅವರ ಸಹೋದರ ನೀಡಿದ ದೂರಿನ ಅನ್ವಯ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-126-198074847

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.