ಭಾನುವಾರ, ಡಿಸೆಂಬರ್ 4, 2022
21 °C

ಕಳಸ: ಸಂಜೀವಿನಿ ಒಕ್ಕೂಟಕ್ಕೆ ₹ 99 ಲಕ್ಷ ಅನುದಾನ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಳಸ: ತಾಲ್ಲೂಕಿನ 6 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳಾ ಸ್ವಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಕ್ಕೆ ಒಟ್ಟು ₹ 99 ಲಕ್ಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ನಡೆದ ಸಂಜೀವಿನಿ ಒಕ್ಕೂಟದ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಳಸ ಪಂಚಾಯಿತಿ ವ್ಯಾಪ್ತಿಯ ಸಂಘಗಳಿಗೆ ₹ 28.5 ಲಕ್ಷ, ಹೊರನಾಡು ಗ್ರಾಮಕ್ಕೆ ₹ 7.5 ಲಕ್ಷ, ತೋಟದೂರು ಗ್ರಾಮಕ್ಕೆ ₹ 21 ಲಕ್ಷ, ಮರಸಣಿಗೆ ಗ್ರಾಮಕ್ಕೆ ₹ 9 ಲಕ್ಷ, ಇಡಕಿಣಿ ಗ್ರಾಮಕ್ಕೆ ₹ 12 ಲಕ್ಷ ಮತ್ತು ಸಂಸೆ ಗ್ರಾಮದ ಸಂಘಗಳಿಗೆ ₹ 21 ಲಕ್ಷ ಅನುದಾನ ಬಿಡುಗಡೆಯಾಗಿದೆ. ಈ ಅನುದಾನವನ್ನು ಸದ್ಯದಲ್ಲೇ ವಿತರಣೆ ಮಾಡಲಾಗುತ್ತದೆ ಎಂದರು.

ಕಳಸ ಪಂಚಾಯಿತಿ ಅಧ್ಯಕ್ಷೆ ಸುಜಯಾ, ಸದಸ್ಯರಾದ ರಂಗನಾಥ್, ಕಾರ್ತಿಕ್ ಶಾಸ್ತ್ರಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪ್ರಕಾಶ್, ಒಕ್ಕೂಟದ ಅಧ್ಯಕ್ಷೆ ಸೌಮ್ಯಾ, ಮಾಲಿನಿ, ತಾಲ್ಲೂಕು ವ್ಯವಸ್ಥಾಪಕಿ ಶಾಲಿನಿ, ರತಿ, ಜಯಂತಿ, ಜ್ಯೋತಿ, ವಿಜಯಲಕ್ಷ್ಮಿ, ಪವಿತ್ರಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು