ಕಳಸ: ತಾಲ್ಲೂಕಿನ ರಸ್ತೆ ಕಾಮಗಾರಿಗಳಲ್ಲಿ ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಳಸ ತಾಲ್ಲೂಕು ಸಮಿತಿ ಮೇ 31ರಂದು ಪಟ್ಟಣದಲ್ಲಿ ರಸ್ತೆ ತಡೆ ನಡೆಸಲು ಮುಂದಾಗಿದೆ.

ಪಟ್ಟಣದ ಕಳಸೇಶ್ವರ ದೇವಸ್ಥಾನದ ಬಳಿ ಕಾಂಕ್ರೀಟ್ ರಸ್ತೆ ಕಾಮಗಾರಿ ತಿಂಗಳ ಹಿಂದೆಯೇ ನಿಂತುಹೋಗಿದ್ದು, ಚರಂಡಿ ನೀರು ರಥ ಬೀದಿಯಲ್ಲೇ ಹರಿಯುತ್ತಿದೆ. ರಥಬೀದಿಯಲ್ಲಿ ಬಿದ್ದ ದೂಳಿನಿಂದ ಸವಾರರು, ನಿವಾಸಿಗಳಿಗೆ ತೊಂದರೆಯಾಗಿದೆ. ಮಳೆಯ ಸಂದರ್ಭದಲ್ಲಿ ಕಳಸೇಶ್ವರ ದೇವಸ್ಥಾನಕ್ಕೆ ಹೋಗುವ ಭಕ್ತರು ಕೆಸರನ್ನು ತುಳಿದುಕೊಂಡೇ ದೇವಸ್ಥಾನಕ್ಕೆ ಹೋಗಬೇಕಾಗಿದೆ. ಇದರಿಂದ ಪಟ್ಟಣದ ನಿವಾಸಿಗಳು, ವ್ಯಾಪಾರಸ್ಥರು ಸಂಕಷ್ಟದಲ್ಲಿದ್ದಾರೆ ಎಂದು ಸಿಪಿಐ ಮುಖಂಡ ಗೋಪಾಲ ಶೆಟ್ಟಿ ತಿಳಿಸಿದ್ದಾರೆ.

ಕಳಸ- ಕುದುರೆಮುಖ- ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿಗೆ ₹13 ಕೋಟಿ ಅನುದಾನ ಮಂಜೂರಾಗಿದೆ. ಎರಡು ವರ್ಷಗಳಿಂದ ಈ ಕಾಮಗಾರಿ ಮುಗಿಸಲು ಲೋಕೋಪಯೋಗಿ ಇಲಾಖೆ ಅಸಮರ್ಥವಾಗಿದೆ. ಇದರಿಂದ ಈ ಹೆದ್ದಾರಿ ಬಳಸುವ ಸಾವಿರಾರು ಜನರಿಗೆ ತೊಂದರೆ ಉಂಟಾಗಿದೆ ಎಂದು ದೂರಿದ್ದಾರೆ.

ಎರಡೂ ರಸ್ತೆ ಕಾಮಗಾರಿಗಳನ್ನು ಕೂಡಲೇ ಆರಂಭಿಸಬೇಕು. ಕೈಮರದಿಂದ ಕಳಸೇಶ್ವರ ದೇವಸ್ಥಾನದವರೆಗೂ ಎರಡೂ ಬದಿ ಚರಂಡಿ ಮತ್ತು ಪಾದಚಾರಿ ಮಾರ್ಗ ನಿರ್ಮಿಸಬೇಕು. ತಪ್ಪಿದರೆ ಇದೇ 31ರಂದು ಕಳಸ ಪಟ್ಟಣದಲ್ಲಿ ವ್ಯಾಪಾರಸ್ಥರು, ವಾಹನ ಮಾಲೀಕರು, ವಿವಿಧ ಸಂಘ ಸಂಸ್ಥೆಗಳ ಮತ್ತು ಸಾರ್ವಜನಿಕರ ಬೆಂಬಲದೊಂದಿಗೆ ರಸ್ತೆ ತಡೆ ನಡೆಸಲಾಗುತ್ತದೆ ಎಂದು ಸಿಪಿಐ ಮುಖಂಡ ಲಕ್ಷ್ಮಣಾಚಾರ್ ಎಚ್ಚರಿಸಿ ದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-126-523017417

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.