ತರೀಕೆರೆ: ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಶಾಸಕ ಡಿ.ಎಸ್. ಸುರೇಶ್ ಹೇಳಿದರು.
ಸಮೀಪದ ಕಲ್ಲತ್ತಿಗಿರಿಯಲ್ಲಿ ತಾಲ್ಲೂಕು ಪಂಚಾಯಿತಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಸ್.ಜೆ.ಎಂ. ಕಾಲೇಜು, ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಲ್ಲತ್ತಿಗಿರಿ ಪುಣ್ಯಕ್ಷೇತ್ರವಾಗಿದ್ದು, ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುವುದು. ರಸ್ತೆ, ಶೌಚಾಲಯ, ಸೇರಿದಂತೆ ಮೂಲಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಗೀತಾ ಶಂಕರ್, ‘ಆರೋಗ್ಯಕ್ಕೆ ಹಾನಿಕಾರಕವಾದ ಪ್ಲಾಸ್ಟಿಕ್ ತ್ಯಾಜ್ಯಗಳು ನೀರಿನಲ್ಲಿ ಹಾಗೂ ಮಣ್ಣಿನಲ್ಲಿ ಕರಗುವುದಿಲ್ಲ. ಇವುಗಳಿಂದ ಕ್ಯಾನ್ಸರ್‌ನಂತಹ ಕಾಯಿಲೆಗಳು ಹರಡಲು ಕಾರಣವಾಗುತ್ತವೆ’ ಎಂದರು.
ತಿಗಡ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್. ಮುರುಗ, ವೀರಭದ್ರೇಶ್ವರ ಸೇವಾ ಸಮಿತಿ ಅಧ್ಯಕ್ಷ ಹಾಲಪ್ಪ, ಚೌಡೇಶ್ವರಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲಪ್ಪ, ತಿಗಡ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.