ಶನಿವಾರ, ಡಿಸೆಂಬರ್ 3, 2022
21 °C

ತಂತ್ರಜ್ಞಾನ ಕ್ಷೇತ್ರದಲ್ಲೂ ಕನ್ನಡ ಬೆಳೆಯಲಿ: ಡಾ.ಸತ್ಯನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡಿಗೆರೆ: ತಂತ್ರಜ್ಞಾನದಲ್ಲಿ ಕನ್ನಡ ಬಳಕೆಯ ಕೊರತೆಯಿದ್ದು, ಕಂಪ್ಯೂಟರ್, ಮೊಬೈಲ್‌‌ಗಳಲ್ಲಿ ಕನ್ನಡ ಭಾಷೆಯು ಇನ್ನಷ್ಟು ಪ್ರಜ್ವಲಿಸಬೇಕು ಎಂದು ಉಪನ್ಯಾಸಕ ಡಾ.ಸತ್ಯನಾರಾಯಣ ಅಭಿಪ್ರಾಯಪಟ್ಟರು.

ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಶಾಸಕ ಎಂ.ಪಿ ಕುಮಾರಸ್ವಾಮಿ ಮಾತನಾಡಿ, ‘ತಾಲ್ಲೂಕಿನಲ್ಲಿ ಮತ್ತೊಮ್ಮೆ ಕನ್ನಡ ಹಬ್ಬ ಆಚರಿಸೋಣ’ ಎಂದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕುಸುಮಾ ಮಂಜುನಾಥ್, ಸುಧಾ ಮಂಜುನಾಥ್, ಅಲ್ತಾಫ್ ಬಿಳಗುಳ, ಬಕ್ಕಿ ರವೀಂದ್ರ, ಡಾ.ಎಚ್.ಎಸ್ ಯಲ್ಲೇಶ್‍ಕುಮಾರ್, ಪುಷ್ಪಾವತಿ ಅವರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ತಹಶೀಲ್ದಾರ್ ನಾಗರಾಜು, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಕಮಲಾಕ್ಷಿ, ಸದಸ್ಯರಾದ ಸಿ.ಎಂ ಗೀತಾ, ಮಂಜು ಪಟೇಲ್, ಚಂದ್ರಶೇಖರ್, ಕಸಾಪ ಅಧ್ಯಕ್ಷ ಶಾಂತಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹರ್ಷಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತರಾಜ್, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಡಿ.ಡಿ ಪ್ರಕಾಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು