ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಮನ ಮಿಡಿಯುವ ಭಾಷೆ: ಹಿರೇಮಗಳೂರು ಕಣ್ಣನ್

ತರೀಕೆರೆ: ಕಸಾಪ ಮಹಿಳಾ ಘಟಕದ ಸೇವಾ ದೀಕ್ಷಾ ಸಮಾರಂಭ
Last Updated 12 ಸೆಪ್ಟೆಂಬರ್ 2022, 13:50 IST
ಅಕ್ಷರ ಗಾತ್ರ

ತರೀಕೆರೆ: ಕನ್ನಡ ಮನಮಿಡಿಯುವ ಭಾಷೆಯಾಗಿದೆ. ಪ್ರತಿಯೊಬ್ಬರಿಗೂ ಭಾಷಾಭಿಮಾನ ಹೊಂದಬೇಕು ಎಂದು ವಾಗ್ಮಿ ಹಿರೇಮಗಳೂರು ಕಣ್ಣನ್ ಹೇಳಿದರು.

ಭಾನುವಾರ ಪಟ್ಟಣದ ಅನ್ನಪೂರ್ಣ ಸಮುದಾಯ ಭವನದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ಪದಾಧಿಕಾರಿಗಳ ಸೇವಾ ದೀಕ್ಷಾ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.

‘ಸುಧೀರ್ಘ ಇತಿಹಾಸ ಹೊಂದಿರುವ ಕನ್ನಡ ಭಾಷೆ ಪ್ರಸ್ತುತ ಸಂಕಷ್ಟದಲ್ಲಿದೆ. ಕನ್ನಡ ಪರ ಕಾರ್ಯಕ್ರಮಗಳಿಗೆ ಸಂಖ್ಯೆಗಿಂತ ಕನ್ನಡ ಮನಸ್ಸುಗಳು ಮುಖ್ಯ. ಭಾಷೆಯನ್ನು ಉಳಿಸಿ ಬೆಳೆಸಿದ ಪ್ರಾತಃ ಸ್ಮರಣೀಯರನ್ನು ನೆನಪಿಸಿಕೊಳ್ಳುವ ಕಾರ್ಯಕ್ರಮ ಆಗಾಗ ಆಯೋಜನೆಗೊಳ್ಳಬೇಕು’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ‘ರಾಜ್ಯದಲ್ಲಿ ಮೊದಲ ಬಾರಿ ಮಹಿಳಾ ಘಟಕವನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಅಮೃತಾಪುರ ಗ್ರಾಮದಲ್ಲಿ ಕಾವ್ಯ ಕಮ್ಮಟ ಮತ್ತು ವಿಚಾರ ಸಂಕಿರಣ ಏರ್ಪಡಿಸಲಾಗುವುದು’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಅಧಿಕಾರ ಸ್ವೀಕರಿಸಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು.

ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯೆ ಲಕ್ಷ್ಮೀದೇವಮ್ಮ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಪೆನ್ನಯ್ಯ, ಜಿಲ್ಲಾ ಪ್ರಧಾನ ಸಂಚಾಲಕ ಇಮ್ರಾನ್ ಅಹಮದ್ ಬೇಗ್, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಸಂಚಾಲಕಿ ಎಂ.ಎಸ್.ವಿಶಾಲಾಕ್ಷಮ್ಮ, ಸಂಘಟನಾ ಕಾರ್ಯದರ್ಶಿ ಉಮಾ, ಮಮತಾ ಮಹಿಳಾ ಸಮಾಜದ ಅಧ್ಯಕ್ಷೆ ವಿಜಯಾ, ಗಮಕಿ ಶಾರದಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT