ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಾಯಿತಿ ವ್ಯಾಪ್ತಿಯಲ್ಲಿ ಕನ್ನಡ ಕುಠೀರ

ಕೊಪ್ಪ: ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್
Last Updated 2 ಅಕ್ಟೋಬರ್ 2022, 6:09 IST
ಅಕ್ಷರ ಗಾತ್ರ

ಕೊಪ್ಪ: ‘ಕನ್ನಡ ಕುಠೀರಕ್ಕಾಗಿ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ನೀಡಲು ಜಿಲ್ಲಾಧಿಕಾರಿ ಆದೇಶಿಸಿದ್ದು, ಅದನ್ನು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಜವಾಬ್ದಾರಿ ತೆಗೆದುಕೊಂಡು ಸಾಕಾರಗೊಳಿಸಬೇಕು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.

ಬಾಳಗಡಿಯಲ್ಲಿರುವ ಕನ್ನಡ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಕಸಬಾ ಹೋಬಳಿ ಘಟಕದ ಸೇವಾ ದೀಕ್ಷೆ, ಸೇವಾ ಸಂಕಲ್ಪ, ಅಭಿನಂದನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಪ್ರಥಮವಾಗಿ ಸಾಹಿತ್ಯ ಪರಿಷತ್‌ನ ಹೋಬಳಿ ಘಟಕ, ಗ್ರಾಮ ಘಟಕಗಳನ್ನು ಆರಂಭಿಸಿದ್ದರ ಜತೆಗೆ, ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಸಿದ ಹೆಗ್ಗಳಿಕೆ ಇದೆ. ಈ ಬಾರಿ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಕೊಪ್ಪ ತಾಲ್ಲೂಕಿನಲ್ಲಿ ನಡೆಸಲು ಉದ್ದೇಶಿಸಿದ್ದು, ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

‘ಕನ್ನಡ ಸಾಹಿತ್ಯ ಬೆಳೆದು ಬಂದ ಹಾದಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ವ್ಯಾಪ್ತಿ’ ಬಗ್ಗೆ ಮಾತನಾಡಿದ ಕಸಾಪ ತಾಲ್ಲೂಕು ಘಟಕದ ಪೂರ್ವಾಧ್ಯಕ್ಷ ಎಚ್.ಎಂ.ರವಿಕಾಂತ್, ‘ಮೈಸೂರು ರಾಜವಂಶಸ್ಥರು ಆರಂಭಿಸಿದ ಕನ್ನಡ ಸಾಹಿತ್ಯ ಪರಿಷತ್ ಅನ್ನು ಮುಂದೆ ಕನ್ನಡಿಗರ ಸಾರಥ್ಯಕ್ಕೆ ವಹಿಸಿದರು. ಮನಸಿನಲ್ಲಿ ಮೂಡಿದ ಎಲ್ಲಾ ಭಾವನೆಗಳನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಿರುವ ಜಗತ್ತಿನ 8 ಭಾಷೆಗಳ ಪೈಕಿ ಕನ್ನಡ ಪ್ರಮುಖ ಸ್ಥಾನ ಪಡೆದಿದೆ’ ಎಂದು ವಿವರಿಸಿದರು.

ಕಸಬಾ ಹೋಬಳಿ ಕಸಾಪ ನಿಕಟಪೂರ್ವಾಧ್ಯಕ್ಷ ನಟರಾಜ್ ಗೋಗಟೆ ಅವರು ನಿಯೋಜಿತ ಅಧ್ಯಕ್ಷ ಕೆ.ಎಸ್.ಹೇಮಂತ ಶೆಟ್ಟಿ ಅವರಿಗೆ ಕನ್ನಡ ಬಾವುಟ ಹಸ್ತಾಂತರಿಸಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಪ್ರತಿಜ್ಞಾವಿಧಿ ಬೋಧಿಸಿದರು.

ಅಧ್ಯಕ್ಷ ಕೆ.ಎಸ್.ಹೇಮಂತ ಶೆಟ್ಟಿ ಮಾತನಾಡಿ, ‘ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ವಹಿಸಿರುವುದಕ್ಕೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸುತ್ತೇನೆ’ ಎಂದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷೆ ಎಸ್.ಎನ್.ಚಂದ್ರಕಲಾ ಅಧ್ಯಕ್ಷತೆ ವಹಿಸಿದ್ದರು.

ಅಮ್ಮ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸುಧಾಕರ ಎಸ್.ಶೆಟ್ಟಿ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಿರ್ದೇಶಕ ಎಚ್.ಕೆ.ದಿನೇಶ್ ಹೊಸೂರು, ಕ.ಸಾ.ಪ ಪೂರ್ವಾಧ್ಯಕ್ಷ ಜಿ.ಎಸ್.ನಟರಾಜ್ ಗುಡ್ಡೆತೋಟ, ಜಿಲ್ಲಾ ಘಟಕದ ಸಂಚಾಲಕ ಓಣಿತೋಟ ರತ್ನಾಕರ್, ನಗರ ಘಟಕದ ಅಧ್ಯಕ್ಷೆ ಜಾಸ್ಮಿನ್ ದಯಾಕರ್, ಕಸಬಾ ಘಟಕದ ಗೌರವ ಕಾರ್ಯದರ್ಶಿ ಕೆ.ಎನ್.ಶಿವಾನಂದ, ಸಿ.ಎಚ್.ಪ್ರಕಾಶ್, ಜಾನ್ಸನ್ ಮಾಬೆನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT