ಭಾನುವಾರ, ಡಿಸೆಂಬರ್ 4, 2022
19 °C

ಬೆಳ್ಮಣ್: 130 ಯೂನಿಟ್ ರಕ್ತ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರ್ಕಳ: ತಾಲ್ಲೂಕಿನ ಬೆಳ್ಮಣ್ ರೋಟರಿ ಕ್ಲಬ್, ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಬೆಳ್ಮಣ್ಣು ವಲಯ ಹಾಗೂ ರಕ್ತನಿಧಿ ಸಂಚಯ ಉಡುಪಿ ಇವುಗಳ ಆಶ್ರಯದಲ್ಲಿ ಮುಹೂರ್ತ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.

ಶಿಬಿರಕ್ಕೆ ಚಾಲನೆ ನೀಡಿದ ರಕ್ತನಿಧಿ ಸಂಚಯದ ವೈದ್ಯಾಧಿಕಾರಿ ಡಾ.ವೀಣಾ ಮಾತನಾಡಿ, ರಕ್ತದಾನದ ಉಪಯುಕ್ತತೆಯನ್ನು ನಾವು ಅರಿತಿರಬೇಕು. ಸಂಘಸಂಸ್ಥೆಗಳು ಸಮಾಜಮುಖಿಯಾಗಿ ಇಂತಹ ಶಿಬಿರಗಳನ್ನು ಆಯೋಜಿಸಬೇಕು ಎಂದರು.

ಬಜರಂಗದಳ ಉಡುಪಿ ಜಿಲ್ಲಾ ಸಹಸಂಚಾಲಕ ಚೇತನ್ ಪೆರಲ್ ಕೆ. ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮೂಲಕ ಜಿಲ್ಲೆಯ ವಿವಿಧ ಭಾಗಗಳಲ್ಲಿ ಈ ರೀತಿಯ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳುವ ಮೂಲಕ ಜೀವ ಉಳಿಸುವ ಕಾಯಕ ನಡೆಸಲಾಗುತ್ತಿದೆ ಎಂದರು.

ಸೂರ್ಯಕಾಂತ ಶೆಟ್ಟಿ ಹಾಗೂ ವಲಯ ಸೇನಾನಿ ವಿಘ್ನೇಶ್ ಶೆಣೈ, ವಿಶ್ವ ಹಿಂದೂ ಪರಿಷತ್ ಬೆಳ್ಮಣ್ ವಲಯದ ಅಧ್ಯಕ್ಷ ಪ್ರಭಾಕರ್ ಶೆಟ್ಟಿ ಮಾತನಾಡಿದರು. ರೋಟರಿ ಜಿಲ್ಲಾ ಯೂತ್ ಲಿಡರ್‌ಶಿಪ್ ಸಂಯೋಜಕ ಪಿಎಚ್‌ಎಫ್ ಶೈಲೇಂದ್ರ ರಾವ್ 60 ಬಾರಿ ರಕ್ತದಾನ ಮಾಡಿದ್ದು, ಅವರನ್ನು ಅಭಿನಂದಿಸಲಾಯಿತು.

ರೋಟರಿ ಕ್ಲಬ್ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಆಲ್ವಿನ್ ನೇರಿ ಪಿಂಟೊ ನಿರೂಪಿಸಿದರು. ಸದಸ್ಯ ಪ್ರದೀಪ್ ಶೆಟ್ಟಿ ವಂದಿಸಿದರು. ಶಿಬಿರದಲ್ಲಿ ದಾನಿಗಳಿಂದ 130 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು