ನರಸಿಂಹರಾಜಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಅಹಿಂದ ಸಂಘಟನೆ ಖಂಡಿಸಿದೆ.
ಈ ಬಗ್ಗೆ ಹೇಳಿಕೆ ನೀಡಿ, ಹಿಂದುಳಿದ ಸಮುದಾಯಗಳ ನಾಯಕ ಸಿದ್ದರಾಮಯ್ಯ ಅವರಿಂದ ಮುಖ್ಯಮಂತ್ರಿ ಪದವಿ ಕಸಿದುಕೊಳ್ಳಬೇಕು. ರಾಜ್ಯದಲ್ಲಿನ ಬಡ ಸಮುದಾಯಗಳ ಶಕ್ತಿ ಕುಂದಿಸಬೇಕು ಎಂಬ ದುರುದ್ದೇಶದಿಂದ ಮನುವಾದಿಗಳು, ಜಾತಿವಾದಿಗಳು, ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜ್ಯಪಾಲರ ಕ್ರಮ ಸಂವಿಧಾನ, ಕಾನೂನು ಬಾಹಿರ ಮತ್ತು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ ಎಂದು ದೂರಿದ್ದಾರೆ. ರಾಜ್ಯಪಾಲರ ಈ ಕ್ರಮವನ್ನು ಅಹಿಂದ ಸಂಘಟನೆ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದೆ.
ಹೇಳಿಕೆಗೆ ಅಹಿಂದ ಸಂಘಟನೆಯ ರಾಜ್ಯ ಮಹಿಳಾ ಘಟಕದ ಎಂ.ವಿ.ಭವಾನಿ, ಜಿಲ್ಲಾ ಸಂಘಟನಾ ಸಂಚಾಲಕ ಎಸ್.ರಾಜೇಶ್, ರಾಜ್ಯ ಜಂಟಿ ಸಂಚಾಲಕ ತರೀಕೆರೆ ವೆಂಕಟೇಶ್, ತಾಲ್ಲೂಕು ಸಂಘಟನಾ ಸಂಚಾಲಕ ಬಿ.ಆರ್.ಸಿದ್ದಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಅಬ್ದುಲ್ ರೆಹಮಾನ್ ಸಹಿ ಹಾಕಿದ್ದಾರೆ.