ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್ ಚುನಾವಣೆ | ಜಗತ್ತಿಗೆ ಬಿಜೆಪಿಯ ಶಕ್ತಿ ತೋರಿಸಬೇಕು: ವಿಜಯೇಂದ್ರ

Published 27 ಮೇ 2024, 14:18 IST
Last Updated 27 ಮೇ 2024, 14:18 IST
ಅಕ್ಷರ ಗಾತ್ರ

ಮೂಡಿಗೆರೆ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿಗೆ ಅಭೂತಪೂರ್ವ ಗೆಲುವು ನೀಡುವ ಮೂಲಕ ಜಗತ್ತಿಗೆ ಬಿಜೆಪಿಯ ಶಕ್ತಿಯನ್ನು ತೋರಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ರಾತ್ರಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ‘ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದ ಇಬ್ಬರೂ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜಗತ್ತಿಗೆ ಸಂದೇಶವನ್ನು ನೀಡಬೇಕು.  ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಿರಂತರ ಸಂಘಟನೆಯನ್ನು ಕೈಗೊಳ್ಳಲು ನನ್ನ ಪ್ರೋತ್ಸಾಹ ಎಂದಿಗೂ ಇದ್ದು, ಕಾರ್ಯಕರ್ತರು ಇಂದಿನಿಂದಲೇ ಈ ಪ್ರಯತ್ನಕ್ಕೆ ಕೈಜೋಡಿಸಬೇಕು’ ಎಂದರು.

ಅಭ್ಯರ್ಥಿ ದನಂಜಯ ಸರ್ಜಿ ಮಾತನಾಡಿ, ‘ಇಂದಿನ ಭವ್ಯ ಭಾರತದ ಬೆಳವಣಿಗೆಯಲ್ಲಿ ಶಿಕ್ಷಿತರ ಪಾತ್ರ ಪ್ರಮುಖವಾಗಿದ್ದು, ಶಿಕ್ಷಕರು, ಪದವೀಧರರು ಬಿಜೆಪಿಗೆ ಮತ ಹಾಕುವ ಮೂಲಕ ಮೋದಿಗೆ ಗೆಲುವನ್ನು ಸಮರ್ಪಿಸಬೇಕು.  ಕಾರ್ಯಕರ್ತರು ಒಗ್ಗಟ್ಟಿನಿಂದ ದುಡಿದು  ಪಕ್ಷದ ಗೆಲುವಿಗೆ ಬೆನ್ನೆಲುಬಾಗಬೇಕು’ ಎಂದರು.

ವಿಧಾನಪರಿಷತ್ ಉಪ ಸಭಾಪತಿ ಎಂ. ಕೆ ಪ್ರಾಣೇಶ್, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್ ಬೋಜೇಗೌಡ ಮಾತನಾಡಿದರು. ಶಾಸಕರಾದ ಸುನಿಲ್ ಕುಮಾರ್, ಹರೀಶ್ ಪೂಂಜಾ, ಡಿ.ಎಸ್ ಅರುಣ್, ಬಿಜೆಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜ್ ಶೆಟ್ಟಿ, ತಾಲ್ಲೂಕು ಘಟಕದ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ, ಜೆ.ಸ್ ರಘು, ಕೆ.ಸಿ ರತನ್, ನರೇಂದ್ರ, ಪುಣ್ಯಪಾಲ್, ಶಿವಣ್ಣ ಹಳಸೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT