ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯಲ್ಲಿ ತುಂಗಾ ನದಿ ಉಕ್ಕಿ ಹಲವು ರಸ್ತೆಗಳು ಜಲಾವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕಿಗ್ಗಾ–ಮಳೂರು–ಕೋಗಿನಬೈಲು–ಮೇಲ್ಗಟ್ಟ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ನೀರಿನಿಂದ ತುಂಬಿಕೊಂಡಿವೆ. ಗ್ರಾಮಸ್ಥರು ಹಾಗೂ ವಾಹನ ಸವಾರರು ಪರದಾಡುವಂತಾಗಿದೆ. ಮೂಡಿಗೆರೆಯ ಕೊಟ್ಟಿಗೆಹಾರ–ಚಾರ್ಮಾಡಿ ಮಾರ್ಗದಲ್ಲಿಯೂ ಮಳೆಯ ಆರ್ಭಟ ಜೋರಾಗಿದ್ದು, ಸತತ 5 ತಾಸುಗಳಿಂದ ಮಳೆ ಸುರಿಯುತ್ತಿದೆ. ಘಾಟಿಯಲ್ಲಿ ವಾಹನ ಚಾಲನೆಗೆ ಸವಾರರು ಪರದಾಡುತ್ತಿದ್ದಾರೆ.

ಮಳೆಯ ನಡುವೆ ಶೃಂಗೇರಿಯ ಮರಿಗೆಬೈಲು ಬಳಿ ಬಸ್ ಹಾಗೂ ಮಿನಿ ಟ್ರಕ್ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. ಮೂಡಿಗೆರೆಯ ಬಿದರಹಳ್ಳಿ ಬಳಿ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.