ನರಸಿಂಹರಾಜಪುರ: ‘ಕನ್ನಡ ಸಾಹಿತ್ಯ ಪರಿಷತ್ ಮೂಲಕ ಹಳ್ಳಿಗಳಲ್ಲೂ ಕನ್ನಡದ ಕಂಪನ್ನು ಪ್ರಸರಿಸುತ್ತಿದ್ದೇವೆ’ ಎಂದು ಪರಿಷತ್ತಿನ ಸದಸ್ಯ ಎಂ.ಪಿ.ಚಕ್ರಪಾಣಿ ಹೇಳಿದರು.

ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಪಟ್ಟಣದ ನೇತಾಜಿ ನಗರದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಸ್. ಪೂರ್ಣೇಶ್ ಅಧ್ಯಕ್ಷತೆ ವಹಿಸಿದ್ದರು. ‘ಶೀಘ್ರದಲ್ಲೇ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಪೂರ್ವಭಾವಿ ಸಭೆ ಕರೆಯಲಾಗುವದು. ಕನ್ನಡದ ಕೆಲಸಕ್ಕೆ ಎಲ್ಲರೂ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಚಾಲಕ ಬಿ.ನಂಜುಂಡಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷೆ ಜುಬೇದಾ, ನೇತಾಜಿ ನಗರ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪರಮೇಶ್, ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮಂಜಪ್ಪ, ಹೋಬಳಿ ಕಾರ್ಯದರ್ಶಿ ಆರ್.ನಾಗರಾಜ್, ಜೇಸಿ ಪೂರ್ವಾಧ್ಯಕ್ಷ ಚರಣರಾಜ್, ದೇವರಾಜ್, ಸುಜಾತಾ ಇದ್ದರು. ಕಡೂರು ತಾಲ್ಲೂಕಿನ ಗಾಯಕ ಹಿರೇನಲ್ಲೂರು ಶ್ರೀನಿವಾಸ್ ಕನ್ನಡ ಚಿತ್ರಗೀತೆಗಳ ಅಂತ್ಯಾಕ್ಷರಿ ನಡೆಸಿಕೊಟ್ಟರು. ವಿಜೇತರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ನೀಡಲಾಯಿತು. ಕಲಾವಿದ ಪುರುಷೋತ್ತಮ ಅವರನ್ನು ಸನ್ಮಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.