ಚಿಕ್ಕಮಗಳೂರು: ದೊಡ್ಡ ಪ್ರಮಾಣದಲ್ಲಿ ಗುಂಪು ಗುಂಪುಗಳಾಗಿ ಆನೆಗಳು ನಾಡಿನೆಡೆಗೆ ಲಗ್ಗೆ ಇಡುತ್ತಿದ್ದು, ಈ ಬಗ್ಗೆ ಅರಣ್ಯ ಇಲಾಖೆ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ‘ಆಲ್ದೂರು, ಮೂಡಿಗೆರೆ ಭಾಗದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಯಾವ ಕಾಲದಲ್ಲೂ ಆನೆಗಳು ಜನವಸತಿ ಕಡೆಗೆ ಬಂದಿರಲಿಲ್ಲ. ಆನೆ ಕಾರಿಡಾರ್ ಅಲ್ಲದ ಪ್ರದೇಶಕ್ಕೂ ಬರುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು’ ಎಂದರು.

ಆನೆ ಹಾವಳಿಯಿಂದ ಹಾನಿಗೆ ಒಳಗಾದ ರೈತರಿಗೆ ನೀಡುತ್ತಿರುವ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ. ಸೂಕ್ತ ಪರಿಹಾರ ನೀಡಬೇಕು ಎಂದು ತಿಳಿಸಿದರು.

ಸಹಾಯಕ ಅರಣ್ಯ ಸಂರಕ್ಷಣಾಕಾರಿ ಕೆ.ಎಸ್. ಮೋಹನ್ ಮಾತನಾಡಿ, ‘ಬೇಲೂರಿನಿಂದ ಜಿಲ್ಲೆಗೆ ಬಂದಿರುವ ಆನೆ ಹಿಡಿಯಲು ಕಾರ್ಯಾಚರಣೆ ನಡೆಸಲಾಗುತ್ತಿದೆ. ಭದ್ರಾ ವನ್ಯಜೀವಿ ವಿಭಾಗದಲ್ಲಿ ಆನೆ ಸಾಫ್ಟ್ ರಿಲೀಸ್ ಕೇಂದ್ರ ತೆರೆಯಲು ಕ್ರೀಯಾ ಯೋಜನೆ ಸಿದ್ಧವಾಗುತ್ತಿದೆ. ಯೋಜನೆ ಅನುಷ್ಠಾನಕ್ಕೆ ಬಂದರೆ ಸಮಸ್ಯೆ ಕಡಿಮೆಯಾಗಲಿದೆ’ ಎಂದರು.

ಕತ್ರಿಮಾರಮ್ಮ ದೇವಾಲಯದ ಎದುರು ನಡೆದಿರುವ ಕಾಂಕ್ರಿಟ್ ರಸ್ತೆ ಕಾಮಗಾರಿ ಕಳಪೆಯಾಗಿದೆ. ಈ ಬಗ್ಗೆ 8 ತಿಂಗಳ ಹಿಂದೆ ಅಕಾರಿಗಳ ಗಮನಕ್ಕೆ ತಂದರೂ ಸರಿಪಡಿಸಿಲ್ಲ. ಒಂದು ವಾರದಲ್ಲಿ ಕಾಮಗಾರಿ ಸರಿಪಡಿಸಬೇಕು. ಇಲ್ಲದಿದ್ದರೆ ಸೂಕ್ತ ಕ್ರಮಕ್ಕೆ ಜಿಲ್ಲಾಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು ಸಿ.ಟಿ.ರವಿ ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ಎರಡು ವರ್ಷಗಳಾದರೂ ವಿದ್ಯುತ್ ಸಂಪರ್ಕ ನೀಡಿಲ್ಲ. ಈ ಬಾರಿಯ ಬೇಸಿಗೆ ಕಳೆದರೂ ಸಂಪರ್ಕ ನೀಡದಿದ್ದರೆ ರೈತರು ಏನು ಮಾಡಬೇಕು. ತಾಲ್ಲೂಕಿನಲ್ಲಿ ಬಾಕಿ ಉಳಿದಿರುವ ಫಲಾನುಭವಿಗಳ ಪಂಪ್ಸೆಟ್ಗಳಿಗೆ ಮೂರು ತಿಂಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ‘ಅಲ್ಲಂಪುರ, ಬೀಕನಹಳ್ಳಿ, ಮುಗುಳುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನಿನಲ್ಲಿ ಅನಕೃತವಾಗಿ ಮನೆ ನಿರ್ಮಿಸಿಕೊಂಡಿರುವ ನಿವಾಸಿಗಳು ಸಕ್ರಮ ಕೋರಿ 95–ಸಿ ಅಡಿ ಅರ್ಜಿ ಸಲ್ಲಿಸಿದ್ದು, ಹಕ್ಕುಪತ್ರ ನೀಡಿಲ್ಲ. ಕೂಡಲೇ ಜಂಟಿ ಸರ್ವೆ ಮಾಡಿ ಸಮಸ್ಯೆ ಇತ್ಯರ್ಥಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಮೂನೆ 50, 53 ಹಾಗೂ 94–ಸಿ, 94–ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಹಕ್ಕು ಪತ್ರ ನೀಡಲು ವಿಳಂಭವಾಗುತ್ತಿದೆ. ಚಿಕ್ಕಮಗಳೂರು-ಕಡೂರು ರಸ್ತೆ ಕಾಮಗಾರಿ ಪೂರ್ಣಗೊಂಡು 2 ವರ್ಷ ಕಳೆದಿದೆ. ಆದರೂ ಸಹ ರಸ್ತೆ ಬದಿಯಲ್ಲಿ ಸಸಿ ನೆಡುವ ಕೆಲಸ ಮಾಡಿಲ್ಲ. ಬೇಸಿಗೆಯಲ್ಲಿ ಸಸಿ ನೆಟ್ಟರೆ ಬೆಳವಣಿಗೆ ಕುಂಠಿತವಾಗುತ್ತದೆ. ಆದ್ದರಿಂದ ಮಳೆಗಾಲ ಆರಂಭದಲ್ಲೇ ಸಸಿಗಳನ್ನು ನೆಡಬೇಕು. ಸಾಕಷ್ಟು ಹಣ್ಣಿನ ಗಿಡಗಳನ್ನು ನೆಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ವಿಜಯಕುಮಾರ್, ಕಡೂರು ತಾ.ಪಂ. ಕಾರ್ಯನಿರ್ವಹಣಾಕಾರಿ ಪ್ರವೀಣ್, ಚಿಕ್ಕಮಗಳುರು ತಹಶೀಲ್ದಾರ್ ರೇಷ್ಮಾ, ಕಡೂರು ತಹಶೀಲ್ದಾರ್ ಪೂರ್ಣಿಮಾ, ನಾಮ ನಿರ್ದೇಶಿತ ಸದಸ್ಯರಾದ ರಾಜೀವ್, ಅಶೋಕ್, ಸುಬ್ಬೇಗೌಡ, ಸಂತೋಷ್, ಲೋಕೇಶ್ ಭಾಗವಹಿಸಿದ್ದರು.

ಗೈರಾದವರ ವಿರುದ್ಧ ಕ್ರಮ

ಕೆಡಿಪಿ ಸಭೆಗೆ ಗೈರಾದ ಅಧಿಕಾರಿಗಳಿಗೆ ಕಾನೂನು ರೀತಿ ನೋಟಿಸ್ ನೀಡಿ ಶಿಸ್ತು ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ‘ಸೂಕ್ತ ಕಾರಣ ನೀಡಿ ಅನುಮತಿ ಪಡೆದು ಗೈರಾದವರಿಗೆ ಅವಕಾಶ ನೀಡಿ. ಇಲ್ಲದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆಲವು ಅಕಾರಿಗಳಿಗೆ ಸಭೆಯ ಬಗ್ಗೆ ಗೌರವವೂ ಇಲ್ಲ. ಆದ್ದರಿಂದ ಶಿಸ್ತು ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಪತ್ರ ಬರೆಯಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.