ಮೂಡಿಗೆರೆ: ಬೆಂಗಳೂರನ್ನು ವಿಶ್ವವೇ ತಿರುಗಿ ನೋಡುವಂತೆ ಮಾಡಿದ ನಾಡಪ್ರಭು ಕೆಂಪೇಗೌಡ ಅವರ ಸಾಮಾಜಿಕ ಪ್ರಜ್ಞೆ, ದಕ್ಷ ಹಾಗೂ ಸಮರ್ಥ ಆಡಳಿತವನ್ನು ಎಷ್ಟು ಕೊಂಡಾಡಿದರೂ ಸಾಲದು ಎಂದು ಬಾಣವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ದೊರೇಶ್ ಹೇಳಿದರು.

ಪಟ್ಟಣದ ಡಿಎಸ್ಬಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಆಡಳಿತದಿಂದ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಅವರು ಮಾತನಾಡಿದರು.

ಬಿ.ಆರ್.ಅಂಬೇಡ್ಕರ್, ಬಸವಣ್ಣ, ಬುದ್ಧ, ಕೆಂಪೇಗೌಡರಂಥ ಮಹಾನ್ ನಾಯಕರು ಒಂದು ಸಮುದಾಯದ ಆಸ್ತಿಯಲ್ಲ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

ತಹಶೀಲ್ದಾರ್ ರಾಜಶೇಖರ್ ಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ್ ಹೊಸ್ಕೆರೆ ಕಾರ್ಯಕ್ರಮ ಉದ್ಘಾಟಿಸಿದರು.

ಸದಸ್ಯರಾದ ಮನೋಜ್, ಆಶಾ ಮೋಹನ್, ಪುಟ್ಟಣ್ಣ, ಗೀತಾ ರಂಜನ್ ಅಜಿತ್ ಕುಮಾರ್, ಕೆಜಿಎಫ್ ಅಧ್ಯಕ್ಷ ಹಳಸೆ ಶಿವಣ್ಣ, ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಪ್ರದೀಪ್, ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಬ್ರಿಜೇಶ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ಕಸಾಪ ಅಧ್ಯಕ್ಷ ಡಿ.ಕೆ.ಲಕ್ಷ್ಮಣ್ಗೌಡ, ಛಲವಾದಿ ಮಹಾಸಭಾ ಅಧ್ಯಕ್ಷ ಮಂಜುನಾಥ್, ಪವಿತ್ರಾ ರತೀಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ, ಬಿಇಒ ಮೀನಾಕ್ಷಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.