ಚಿಕ್ಕಮಗಳೂರು: ಮಾಣಿಕ್ಯಧಾರ ಜಲಪಾತದ ಬಳಿ ಮೃತಪಟ್ಟಿದ್ದ ಕೇರಳದ 16 ವರ್ಷದ ಬಾಲಕಿಯ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯಲ್ಲಿ ಅನುಮಾನಾಸ್ಪದ ಅಂಶ ಕಂಡು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಏ.7ರಂದು ಜಲಪಾತದ ಬಳಿ ನಾಪತ್ತೆಯಾಗಿದ್ದ ಬಾಲಕಿ ಸಮೀಪದ ಪ್ರಪಾತದಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಳು. ಕೇರಳದ ವೈದ್ಯರಿಂದಲೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ಬಾಲಕಿಯ ಕುಟುಂಬಸ್ಥರು ಒತ್ತಾಯಿಸಿದ್ದರು. ಮನವೊಲಿಕೆ ನಂತರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಇಬ್ಬರು ತಜ್ಞ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದರು.

‘ಸಾವಿನ ಬಗ್ಗೆ ಶಂಕಾಸ್ಪದ ಅಂಶ ಕಾಣಿಸಿಲ್ಲ ಎಂಬ ಮಾಹಿತಿ ಇದೆ. ವರದಿ ಬಂದಿಲ್ಲ. ಶುಕ್ರವಾರ ತಡರಾತ್ರಿ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು. ಪಾಲಕ್ಕಾಡಿನ ಅವರ ಮನೆ ತನಕ ಪೊಲೀಸರು ಬೆಂಗಾವಲಾಗಿ ಹೋಗಿದ್ದರು. ಅಂತ್ಯಸಂಸ್ಕಾರ ಶನಿವಾರ ನಡೆದಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.