ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಮಂಗನ ಕಾಯಿಲೆಯಿಂದ ವ್ಯಕ್ತಿ ಸಾವು

Published 3 ಫೆಬ್ರುವರಿ 2024, 23:30 IST
Last Updated 3 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಶೃಂಗೇರಿ (ಚಿಕ್ಕಮಗಳೂರು): ಮಂಗನ ಕಾಯಿಲೆ (ಕೆಎಫ್‍ಡಿ) ದೃಢಪಟ್ಟಿದ್ದ ಶೃಂಗೇರಿ ತಾಲ್ಲೂಕಿನ ಧರೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಕ ಸುಬ್ಬಯ್ಯ ಗೌಡ (79) ಮಣಿಪಾಲ್‍ನ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು. ಮೃತರಿಗೆ ಇಬ್ಬರು ಪುತ್ರರು ಇದ್ದಾರೆ.

ಸುಬ್ಬಯ್ಯಗೌಡ ಎರಡು ವಾರದ ಹಿಂದೆ ಶೃಂಗೇರಿಯ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದಿದ್ದರು. ಜ್ವರ ಉಲ್ಬಣ ಗೊಂಡಿದ್ದರಿಂದ ಮಣಿಪಾಲ್‍ನ ಆಸ್ಪತ್ರೆ ಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

‘ಸುಬ್ಬಯ್ಯಗೌಡರ ಅವರ ಮನೆಯ ಸುತ್ತಮುತ್ತಲಿನ ನಿವಾಸಿಗಳು, ಕಾರ್ಮಿಕ ರನ್ನು ಪರೀಕ್ಷಿಸಲಾಗಿದೆ. ಯಾರಿಗೂ ಕಾಯಿಲೆ ದೃಢಪಟ್ಟಿಲ್ಲ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ದಯಾನಂದ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT