ಮೂಡಿಗೆರೆ: ಸಮಾಜ ಸೇವೆಯ ಮೂಲಕ ಹೆಸರಾದ ಚಿತ್ರನಟರೊಬ್ಬರ ಹೆಸರಿನಲ್ಲಿ ಕ್ರಿಕೆಟ್ ಟೂರ್ನಿ ನಡೆಸುತ್ತಿರುವುದು ಉತ್ತಮ ಕೆಲಸ ಎಂದು ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ರಾಮಯ್ಯ ಹೇಳಿದರು.

ತಾಲ್ಲೂಕಿನ ಕಿರುಗುಂದ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಬಳಗದಿಂದ ನಡೆದ ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

'ಚಿತ್ರನಟ ಪುನೀತ್ ರಾಜಕುಮಾರ್ ಅವರು ಅನೇಕ ಅನಾಥಶ್ರಮ, ಶಾಲೆ, ಗೋಶಾಲೆಗಳಿಗೆ ದೇಣಿಗೆ ನೀಡಿದ್ದಾರೆ. ಪ್ರವಾಹ ಸಂದರ್ಭದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಿದ್ದರು. ಬಡವರ ನೋವುಗಳಿಗೆ ಮಿಡಿಯುವ ಹೃದಯವಂತಿಕೆಯಿಂದ ಜನಾನುರಾಗಿಯಾಗಿದ್ದರು ಎಂಬುವುದು ಅವರ ಸಾವಿನ ನಂತರ ಜಗತ್ತಿಗೆ ತಿಳಿದಿದೆ. ಅಂತಹ ಮೇರು ವ್ಯಕ್ತಿತ್ವದ ಸಮಾಜ ಸೇವಕನ ಆದರ್ಶವನ್ನು ಈಗಿನ ಯುವಕರು ಪಾಲನೆ ಮಾಡಬೇಕು' ಎಂದರು.

ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಸದಸ್ಯ ಕೆ.ಎಲ್.ಪುನೀತ್ ಮಾತನಾಡಿದರು. ಕಿರುಗುಂದ ಗ್ರಾಪಂ ಮಾಜಿ ಅಧ್ಯಕ್ಷ ಯು.ಎಚ್.ರಾಜಶೇಖರ್, ಮಾಜಿ ಸದಸ್ಯ ಎಂ.ಸಿ.ಆದರ್ಶ್, ಪಿಡಿಒ ಕೃಷ್ಣಪ್ಪ, ಕಾರ್ಯದರ್ಶಿ ನಂಜಯ್ಯ, ನಂಜುಂಡೇಗೌಡ, ರಾಹುಲ್, ಹರಿಭಾರ್ಗವ, ಮಂಜುನಾಥ್, ಪರಮೇಶ್ವರ, ಚನ್ನಕೇಶವ, ಕಿರಣ್, ಕೌಶಿಕ್, ಚಂದ್ರಪ್ಪ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-126-973053401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.