ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯಗೆ ಸಚಿನ್‌ ಮೀಗಾ ಮನವಿ

Last Updated 4 ಆಗಸ್ಟ್ 2022, 5:13 IST
ಅಕ್ಷರ ಗಾತ್ರ

ಚಿಕ್ಕಮಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್‌ ಮೀಗಾ ಮನವಿ ಸಲ್ಲಿಸಿದ್ದಾರೆ.

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವದಲ್ಲಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರ ವರ್ತನೆಯಿಂದ ಬೇಸತ್ತಿದ್ದಾರೆ. ದಿವಂಗತ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ ಕ್ಷೇತ್ರದಿಂದ ನಿಮ್ಮಂತಹ ಜನನಾಯಕರು ಈ ಬಾರಿ ಸ್ಪರ್ಧಿಸಿದರೆ ಮತ್ತೊಮ್ಮೆ ಕಾಂಗ್ರೆಸ್‌ ಪಕ್ಷಕ್ಕೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪುನರ್ಜನ್ಮವಾಗಲಿದೆ।. ಈ ಹಿನ್ನೆಲೆಯಿಂದ ತಮ್ಮ ಜನಮದಿನದ ಸಂದರ್ಭದ ಈ ವೇದಿಕೆಯಲ್ಲಿ ಮನವಿ ಪುರಸ್ಕರಿಸುವಂತೆ ಕೋರುತ್ತೇವೆ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ.

‘ಹೊಸ ಚಿಂತನೆ ಮಾಡಿದ್ದೇವೆ. ಸಿದ್ದರಾಮಯ್ಯ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಗೆಲ್ಲುತ್ತಾರೆ ಎಂಬ ಭರವಸೆ ಇದೆ. ಅವರಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಸಚಿನ್ ಮೀಗಾ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT