ಮಂಗಳವಾರ, ಜೂನ್ 22, 2021
21 °C

ಕೋಡಿಹಳ್ಳಿ: ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ 51 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ತಾಲ್ಲೂಕಿನ ಅಂಬಳೆ ಹೋಬಳಿಯ ಕೋಡಿಹಳ್ಳಿಯಲ್ಲಿ ಕೋವಿಡ್‌ ದೃಢಪಟ್ಟಿದ್ದ ವ್ಯಕ್ತಿಯ ಶವಸಂಸ್ಕಾರದಲ್ಲಿ ಭಾಗಿಯಾಗಿದ್ದ  22 ಹಾಗೂ ಅವರ ಪ್ರಾಥಮಿಕ ಸಂಪರ್ಕದ 29 ಸೇರಿದಂತೆ ಒಟ್ಟು 51 ಮಂದಿಗೆ ಕೋವಿಡ್‌ ದೃಢಪಟ್ಟಿದೆ.

ಗ್ರಾಮದಲ್ಲಿ ನಾಲ್ಕು ದಿನಗಳ ಹಿಂದೆ ಅಂತ್ಯಸಂಸ್ಕಾರ ನಡೆದಿತ್ತು. ಸುಮಾರು 30 ಮಂದಿ ಪಾಲ್ಗೊಂಡಿದ್ದರು.

‘ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್‌ ಲಕ್ಷಣಗಳು ಇದ್ದವು, ಮಾದರಿಯನ್ನು ಪರೀಕ್ಷೆಗೆ ನೀಡಿದ್ದರು. ಆಟೋದಲ್ಲಿ ಆಸ್ಪತ್ರೆಗೆ ತೆರಳುವಾಗ ಆ ವ್ಯಕ್ತಿ ಮೃತಪಟ್ಟಿದ್ದರು. ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿತ್ತು’ ಎಂದು ತಹಶೀಲ್ದಾರ್‌ ಡಾ.ಕೆ.ಜೆ.ಕಾಂತರಾಜ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮೃತ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿತ್ತು. ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡವರು ಮತ್ತು ಅವರ ಪ್ರಾಥಮಿಕ ಸಂಪರ್ಕಿತರು ಮಾದರಿ ಪರೀಕ್ಷೆಗೆ ನೀಡಿದ್ದರು. 51 ಮಂದಿಗೆ ಕೋವಿಡ್‌ ಪತ್ತೆಯಾಗಿದೆ’ ಎಂದು ಅವರು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು