ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪ: ದುರ್ಗಾ ದೇವಿಗೆ ವಾರಾಹಿ ಅಲಂಕಾರ

Last Updated 2 ಅಕ್ಟೋಬರ್ 2022, 6:22 IST
ಅಕ್ಷರ ಗಾತ್ರ

ಕೊಪ್ಪ: ಇಲ್ಲಿನ ಫ್ರೆಂಡ್ಸ್ ಸರ್ಕಲ್ ಗೆಳೆಯರ ಬಳಗ, ಗಣೇಶ-ದುರ್ಗಾ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮಾರ್ಕೇಟ್ ರಸ್ತೆಯಲ್ಲಿನ ಬಲಮುರಿ ವೀರಗಣಪತಿ ದೇವಸ್ಥಾನದ ಭವನದಲ್ಲಿ ನವರಾತ್ರಿಯಂದು ಪ್ರತಿಷ್ಠಾಪಿಸಿರುವ ದುರ್ಗಾದೇವಿಗೆ ಶನಿವಾರ ವಾರಾಹಿ ಅಲಂಕಾರ ಮಾಡಲಾಗಿತ್ತು.

ದೇವಿ ಪಾರಾಯಣ, ಮಧ್ಯಾಹ್ನ ಪ್ರಸಾದ ವಿನಿಯೋಗ ಇತ್ತು. ಪುತ್ತೂರು ಜಗದೀಶ್ ಆಚಾರ್ಯ ಬಳಗದಿಂದ ಸಂಜೆ ‘ಸಂಗೀತ ಗಾನ ಸಂಭ್ರಮ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅ.2ರಂದು ಸಾಮೂಹಿಕ ಕುಂಕುಮಾರ್ಚನೆ, 1001 ತೆಂಗಿನಕಾಯಿ ಮೂಡು ಗಣಪತಿ ಸೇವೆ ನಡೆಯಲಿದ್ದು, ದೇವಿಗೆ ‘ಇಂದ್ರಾಣಿ ಅಲಂಕಾರ’ ಮಾಡಲಾಗುತ್ತಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಕೊಪ್ಪ, ಹೊಸನಗರ, ರಿಪ್ಪನ್ ಪೇಟೆ ತಂಡಗಳ ಕಲಾವಿದರ ಡೆಸ್ಟಿನಿ ಸ್ಕೂಲ್ ಆಫ್ ಡಾನ್ಸ್ ವತಿಯಿಂದ ‘ನೃತ್ಯ ರೂಪಕ’ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT