ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಿ

ಎನ್.ಪಿ.ಎಸ್ ನೌಕರರಿಂದ ಮನವಿ ಸಲ್ಲಿಕೆ
Last Updated 7 ಡಿಸೆಂಬರ್ 2022, 5:48 IST
ಅಕ್ಷರ ಗಾತ್ರ

ಕೊಪ್ಪ: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಎನ್.ಪಿ.ಎಸ್ ನೌಕರರು ಸೋಮವಾರ ಪುರಭವನದಿಂದ ಬಾಳಗಡಿಯಲ್ಲಿರುವ ತಾಲ್ಲೂಕು ಪಂಚಾಯಿತಿವರೆಗೆ ಜಾಥಾ ತೆರಳಿ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಶಾಸಕ ಟಿ.ಡಿ.ರಾಜೇಗೌಡ ಅವರು, ‘ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುವಂತೆ ಈ ಹಿಂದೆಯೂ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಬಾರಿ ಅಧಿವೇಶನದಲ್ಲಿ ನಿಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸುವ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ರಂಗನಾಥ ಎಸ್.ಆರ್., ಪ್ರಧಾನ ಕಾರ್ಯದರ್ಶಿ ಲೋಹಿತ್ ಕುಮಾರ್, ಖಜಾಂಚಿ ಸಿದ್ದಪ್ಪ, ಉಪಾಧ್ಯಕ್ಷೆ ಪ್ರಮೋದಾ, ಸಂಘಟನಾ ಕಾರ್ಯದರ್ಶಿ ಲೋಹಿತಾಶ್ವ, ಜಂಟಿ ಕಾರ್ಯದರ್ಶಿ ಜಯಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ನಿರ್ದೇಶಕ ಆದರ್ಶ, ಷಣ್ಮುಗರಾಜನ್, ಗಂಗಾ ಸುಭಾಷ್, ಸುಜಾತಾ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಸಿ.ರಾಜೇಂದ್ರ, ರಾಜ್ಯ ಪರಿಷತ್ ಸದಸ್ಯ ರಾಜೇಶ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರಪ್ಪ ಎಫ್.ಎಲ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ನರಸಿಂಹ, ಪದವೀಧರ ಶಿಕ್ಷಕರ ಸಂಘದ ಓಂಕಾರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT