ಕೊಪ್ಪ: ‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪ, ನರಸಿಂಹರಾಜಪುರ ವ್ಯಾಪ್ತಿಯಲ್ಲಿ ಮುಂಗಾರು ವಿಪತ್ತು ತಡೆಯಲು ಶೌರ್ಯ ವಿಪತ್ತು ಘಟಕಗಳ ಸಭೆ ನಡೆಸಲಾಗಿದೆ’ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ರಾಜೇಶ್ ತಿಳಿಸಿದರು.

ಮಳೆಗಾಲದಲ್ಲಿ ಸಂಭವನೀಯ ವಿಪತ್ತುಗಳನ್ನು ತಡೆಗಟ್ಟಲು ತಾಲ್ಲೂಕು ಮಟ್ಟದ ಕೋರ್ ಕಮಿಟಿ ಸಭೆ, ತುರ್ತು ಸ್ಪಂದನಾ ಸ್ವಯಂ ಸೇವಕರ ಸಭೆಯಲ್ಲಿ ಮಾತನಾಡಿದ ಅವರು, ‘ಕೊಪ್ಪ, ಎನ್.ಆರ್. ಪುರ ತಾಲ್ಲೂಕಿನಲ್ಲಿ 12 ಶೌರ್ಯ ವಿಪತ್ತು ಘಟಕಗಳು ಇದ್ದು, 155 ಸ್ವಯಂ ಸೇವಕರು ಸಾಮಾಜಿಕ ಹಾಗೂ ವಿಪತ್ತು ಸೇವೆ ನೀಡುತ್ತಿದ್ದಾರೆ’ ಎಂದರು.

‘ಮುಂಬರುವ ದಿನಗಳಲ್ಲಿ ಎನ್.ಡಿ.ಆರ್.ಎಫ್ ಜೊತೆ ಸೇರಿ ತಾಲ್ಲೂಕಿನಲ್ಲಿ ನಡೆಯುವ ಅವಘಡಗಳನ್ನು ತಪ್ಪಿಸಲು ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳುವಂತೆ ತರಬೇತಿ ನೀಡಲಾಗಿದೆ. ತಾಲ್ಲೂಕು ಆಡಳಿತ ಮತ್ತು ಎನ್.ಡಿ.ಆರ್.ಎಫ್ನಿಂದ ತರಬೇತಿ ಪಡೆದುಕೊಂಡು ತಂಡ ಪ್ರಶಂಸೆ ಗಿಟ್ಟಿಸಿಕೊಂಡಿದೆ’ ಎಂದು ಅವರು ಮಾಹಿತಿ ನೀಡಿದರು. ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-126-1168830347

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.