ಕೊಪ್ಪ: ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆ ಮೂರು ವರ್ಷದ ಸಾಧನೆ ಕುರಿತು ಸೋಮವಾರ ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ಓಣಿತೋಟ ರತ್ನಾಕರ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

‘ರಾಜ್ಯ ಸರ್ಕಾರದಿಂದ ತಾಲ್ಲೂಕಿಗೆ ₹245.87 ಕೋಟಿ ಬಿಡುಗಡೆಯಾಗಿದೆ. ತಾಲ್ಲೂಕಿನಲ್ಲಿ ಸಮರ್ಪಕವಾಗಿ ಈ ಯೋಜನೆ ಜಾರಿಗೊಳಿಸಲು ಕ್ಷೇತ್ರದ ಶಾಸಕ ಟಿ.ಡಿ. ರಾಜೆಗೌಡ ಅವರ ಮಾರ್ಗದರ್ಶನ, ಯೋಜನೆ ಅನುಷ್ಠಾನ ಸಮಿತಿ ಸದಸ್ಯರು, ಸದಸ್ಯ ಕಾರ್ಯದರ್ಶಿ, 5 ಇಲಾಖೆಯ ಅಧಿಕಾರಿಗಳ ಸಹಕಾರ ದಿಂದ ಪ್ರಗತಿ ಸಾಧಿಸಲು ಸಾಧ್ಯವಾಯಿತು’ ಎಂದು ರತ್ನಾಕರ್ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಡಿ. ನವೀನ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-126-1402029296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.