ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪ: ಕೆಎಫ್‌ಡಿ: ಆತಂಕ ಬೇಡ, ಅರಿವು ಇರಲಿ- ತಾಲ್ಲೂಕು ಆರೋಗ್ಯಾಧಿಕಾರಿ

Published 16 ಫೆಬ್ರುವರಿ 2024, 15:44 IST
Last Updated 16 ಫೆಬ್ರುವರಿ 2024, 15:44 IST
ಅಕ್ಷರ ಗಾತ್ರ

ಕೊಪ್ಪ: ತಾಲ್ಲೂಕಿನ ನುಗ್ಗಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಪಂಚಾಯಿತಿ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ ಅವರು ಮಂಗನ ಕಾಯಿಲೆ (ಕೆಎಫ್‌ಡಿ) ಕುರಿತು ಮಾಹಿತಿ ನೀಡಿದರು.

ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕೆಫ್‌ಡಿ ಬಗ್ಗೆ ಅರಿವು ಮೂಡಿಸಬೇಕು. ರೋಗಲಕ್ಷಣ ಕಂಡುಬಂದರೆ ರಕ್ತ ಪರೀಕ್ಷೆ ಮಾಡಿಸಬೇಕು ಎಂದು ಅವರು ತಿಳಿಸಿದರು.

‘ಫ್ಲೇವಿ ಜಾತಿಯ ವೈರಸ್‌ನಿಂದ ಮಂಗನಕಾಯಿಲೆಯ ತಗುಲುತ್ತಿದ್ದು ಉಣ್ಣೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಮಂಗಗಳು ಸಾಯುವುದು ಈ ರೋಗ ಹರಡಿರುವುದರ ಮುನ್ಸೂಚನೆ. ಎಲ್ಲಾದರೂ ಮಂಗಗಳು ಸತ್ತಿರುವುದು ಕಾಣಿಸಿದರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು’ ಎಂದು ಅವರು ತಿಳಿಸಿದರು.

‘ತೀವ್ರ ಜ್ವರ, ಮೈಕೈ ನೋವು, ತಲೆನೋವು, ಗಂಟುನೋವು, ಗುದದ್ವಾರದ ಮೂಲಕ ರಕ್ತಸ್ರಾವ ರೋಗದ ಪ್ರಮುಖ ಲಕ್ಷಣಗಳು. ಕೊಪ್ಪದ ಸಾರ್ವಜನಿಕ ಅಸ್ಪತ್ರೆಯಲ್ಲಿ ಕೆಎಪ್‌ಡಿ ವಾರ್ಡ್ ತೆರೆದಿದ್ದು ಸೋಂಕಿತರನ್ನು ದಾಖಲು ಮಾಡಲಾಗುತ್ತಿದೆ. ರೋಗ ತಡೆಗಟ್ಟಲು ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದ್ದು, ಆತಂಕ ಬೇಡ’ ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ಎಚ್.ಆರ್.ಜಗದೀಶ್ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಶಿವರಾಮ್, ಗುಲಾಬಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುಧಾಕರ್  ಭಾಗವಹಿಸಿದ್ದರು.

ಮಹಿಳೆಯಲ್ಲಿ ಕೆಎಫ್‌ಡಿ ಪತ್ತೆ

ಕೊಪ್ಪ ಪಟ್ಟಣ ಸಮೀಪದ ಬಿಂತ್ರವಳ್ಳಿ ಗ್ರಾಮದ 25 ವರ್ಷದ ಮಹಿಳೆಯೊಬ್ಬರಲ್ಲಿ ಶುಕ್ರವಾರ ಕೆಎಫ್‌ಡಿ ಪತ್ತೆಯಾಗಿದೆ. ಗುರುವಾರ ಇವರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿ ಪಾಸಿಟಿವ್‌ ಬಂದಿದ್ದು ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT