ಕೊಪ್ಪ: ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ತೆರೆದ ಚರಂಡಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿದ್ದು, ಮಳೆ ಆರಂಭಕ್ಕೂ ಮೊದಲು ಚರಂಡಿಗೆ ಸ್ಲ್ಯಾಬ್ ಅಳವಡಿಸುವಂತೆ ಜನರು ಒತ್ತಾಯಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಇಬ್ಬದಿಯಲ್ಲಿ ಚರಂಡಿ ವ್ಯವಸ್ಥೆ ಇದ್ದರೂ, ಅದಕ್ಕೆ ಮುಚ್ಚಳ ಅಳವಡಿಸಿಲ್ಲ. ಅಂಗಡಿಗಳ ಎದುರು ಅಂಗಡಿ ಮಾಲೀಕರು ಹಲಗೆ ಅಳವಡಿಸಿದ್ದಾರೆ. ಮಳೆಗಾಲದಲ್ಲಿ ಇದು ಸುರಕ್ಷಿತವಲ್ಲ. ಆದಷ್ಟು ಬೇಗ ಮುಚ್ಚಳ ಅಳವಡಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಪಟ್ಟಣದಲ್ಲಿ ಭಾನುವಾರ ಸಂತೆ ದಿನವಾಗಿದ್ದು, ಈ ದಾರಿಯಲ್ಲಿ ಜನಸಂದಣಿ ಹೆಚ್ಚಿರುತ್ತದೆ. ಸಣ್ಣ ಮಕ್ಕಳು, ವೃದ್ಧರು ಮಾರುಕಟ್ಟೆ ರಸ್ತೆಯಲ್ಲಿ ಓಡಾಡುತ್ತಾರೆ. ಮಳೆಗಾಲದಲ್ಲಿ ಆಯತಪ್ಪಿ ಬಿದ್ದರೆ ಅಪಾಯವಿದೆ. ಸಂಬಂಧಿಸಿದ ಗುತ್ತಿಗೆದಾರರು ಇದರ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-126-1897092233

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.