ಕೊಪ್ಪ: ಶೌಚಕ್ಕೆಂದು ಹೋದಾಗ ವಿಷ ಜಂತು ಕಡಿದು ತಾಲ್ಲೂಕಿನ ನುಗ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನ್ ಎಸ್ಟೇಟ್ (ಬಪ್ಪುಂಜಿ)ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ನಿಜಗುಣ ಮತ್ತು ದಿ.ಕೊಟ್ರಮ್ಮ ದಂಪತಿ ಪುತ್ರ ಕೊಟ್ರೇಶ್ (25) ಮೃತಪಟ್ಟಿದ್ದಾರೆ.

ಮನೆಯಲ್ಲಿ ಸೋಮವಾರ ಘಟನೆ ನಡೆದ ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ವಾಪಾಸ್ ಕರೆದುಕೊಂಡು ಬಂದು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿಟ್ಟಿದ್ದಾರೆ ಎಂದು ಗೊತ್ತಾಗಿದೆ.

ದಾವಣಗೆರೆ ಮೂಲದ ನಿಜಗುಣ ಅವರ ಕುಟುಂಬ ಹಲವು ವರ್ಷಗಳಿಂದ ದೇವನ್ ಎಸ್ಟೇಟ್ನಲ್ಲಿ ಕೂಲಿ ಕೆಲಸ ಮಾಡಿಕೊಂಡಿತ್ತು. ಅಂತ್ಯಕ್ರಿಯೆ ಬುಧವಾರ ನಡೆಯಿತು. ಕೊಟ್ರೇಶ್ ಅವರಿಗೆ ಹಾವು ಕಚ್ಚಿ ಸಾವು ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-126-107215740

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.