ಕೊಪ್ಪ: ‘ಶಿವಮೊಗ್ಗ, ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಮಾರ್ಗವಾಗಿ ಮಂಗಳೂರು ಸಂಪರ್ಕ ರೈಲ್ವೆ ಮಾರ್ಗ ಅನುಷ್ಠಾನಕ್ಕೆ ಈ ಹಿಂದೆ ಸರ್ವೆ ನಡೆದಿದ್ದು, ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾರ್ಗ ಬದಲಾಯಿಸಿ ಕೊಪ್ಪ, ಎನ್.ಆರ್.ಪುರ ಭಾಗದ ಜನರಿಗೆ ಘೋರ ಅನ್ಯಾಯ ಮಾಡುತ್ತಿದೆ’ ಎಂದು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಓಣಿತೋಟ ರತ್ನಾಕರ್ ಹೇಳಿದ್ದಾರೆ.

ಶಿವಮೊಗ್ಗದ ಲೋಕಸಭಾ ಸದಸ್ಯ ರಾಘವೇಂದ್ರ ಅವರು ರೈಲ್ವೆ ಮಾರ್ಗವನ್ನು ಶಿವಮೊಗ್ಗ, ಮುತ್ತಿನಕೊಪ್ಪ, ಮುಡುಬ, ತೀರ್ಥಹಳ್ಳಿ, ಶೃಂಗೇರಿ ಮೂಲಕ ಮಂಗಳೂರಿಗೆ ಮಾರ್ಗ ಬದಲಾಯಿಸುವಂತೆ ಮಾಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತದ ಸಂಸದ ಶ್ರೀನಿವಾಸ ಪೂಜಾರಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಶಿವಮೊಗ್ಗ, ಮುತ್ತಿನಕೊಪ್ಪ, ಮುಡುಬ, ತೀರ್ಥಹಳ್ಳಿ, ಶೃಂಗೇರಿ ರೈಲ್ವೆ ಮಾರ್ಗಕ್ಕೆ ₹3,800 ಕೋಟಿ ಅಂದಾಜು ವೆಚ್ಚದಲ್ಲಿ ಟೆಂಡರ್ ಕರೆಯುವ ಹಂತದಲ್ಲಿದ್ದು, ಈ ಕೂಡಲೇ ಶೃಂಗೇರಿ ಕ್ಷೇತ್ರದ ಜನರು ಇದರ ವಿರುದ್ಧ ಪ್ರತಿಭಟಿಸಬೇಕು. ಮುಂದಿನ ದಿನಗಳಲ್ಲಿ ನಾವು ನಡೆಸುವ ಹೋರಾಟದಲ್ಲಿ ಬಿಜೆಪಿಯವರು ಭಾಗವಹಿಸಿ ಶೃಂಗೇರಿ ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಅವರು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-126-1829124170

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.