ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಪ್ಪ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

Published 12 ಜುಲೈ 2023, 15:20 IST
Last Updated 12 ಜುಲೈ 2023, 15:20 IST
ಅಕ್ಷರ ಗಾತ್ರ

ಕೊಪ್ಪ: ಪಟ್ಟಣ ಸಮೀಪದ ಸಣ್ಣಕೆರೆಯಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಸೌಜನ್ಯ ಸೇವಾಶ್ರಮ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಈಚೆಗೆ ನಡೆಯಿತು.

ಸೌಜನ್ಯ ಸೇವಾ ಟ್ರಸ್ಟ್ (ಸೇವಾಶ್ರಮ) ಮುಖ್ಯಸ್ಥ ರಂಗರಾಜನ್ ಮಾತನಾಡಿ, ‘ರಾಜ್ಯದಾದ್ಯಂತ ಪ್ರತಿ ವರ್ಷ 25ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಉಚಿತ ಕಲಿಕಾ ಸಾಮಗ್ರಿಗಳನ್ನು ಸಂಸ್ಥೆಯ ವತಿಯಿಂದ ನೀಡಲಾಗುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳತ್ತ ಒಲವು ತೋರಿ, ಈ ಎಲ್ಲಾ ಸೌಲಭ್ಯಗಳನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳುವಂತೆ ಮಾಡಬೇಕು’ ಎಂದರು.

ಸೌಜನ್ಯ ಸೇವಾಶ್ರಮದ ಕಾರ್ಯ ಚಟುವಟಿಕೆಗಳ ಕುರಿತು ಸಮಾಜ ಸೇವಕ ಕಣ್ಣನ್ ಮಾತನಾಡಿದರು. ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಲ್. ಅಂಜನಪ್ಪ, ಶಿಕ್ಷಣ ಇಲಾಖೆ ರಾಜ್ಯ ಸಂಪನ್ಮೂಲ ವ್ಯಕ್ತಿ ಆರ್.ಡಿ. ರವೀಂದ್ರ ಮಾತನಾಡಿದರು.

ವಿದ್ಯಾರ್ಥಿನಿ ಅಕ್ಷರ ಎಸ್. ಶೆಟ್ಟಿ ದಾನಿಗಳ ಸಹಕಾರದ ಕುರಿತು ಅನಿಸಿಕೆ ವ್ಯಕ್ತಪಡಿಸಿದರು. ಶಿಕ್ಷಕರಾದ ಎಂ.ಎಸ್. ನಟರಾಜ್, ಎ. ಭಾರತಿ ಮತ್ತು ಅಡುಗೆ ಸಿಬ್ಬಂದಿ ಸಾರಾ, ಪಲ್ಲವಿ ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯ್ ಗಂಗನಸರಳು ಅಧ್ಯಕ್ಷತೆ ವಹಿಸಿದ್ದರು. ರಮೇಶ್, ಶ್ರೀಸುತ, ರವಿಶಂಕರ್, ಸೌಜನ್ಯ ಟ್ರಸ್ಟ್ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT