ಕೊಪ್ಪ: ಕೊಪ್ಪ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ಮಾಂಗಲ್ಯ ಸರ ಹಾಗೂ ಚಿನ್ನದ ಸರ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರಣ್ಯಪುರ ಗ್ರಾಮದ ಭವಾನಿ ಎಸ್. ನರಸಿಂಹ ಅವರ ಮಾಂಗಲ್ಯ ಸರ ಕಳವು ಬಗ್ಗೆ ಶೃಂಗೇರಿ ಠಾಣೆಯಲ್ಲಿ ಹಾಗೂ ಕೊಪ್ಪ ತಾಲ್ಲೂಕಿನ ಹಾಲ್ಮತ್ತೂರು ಗ್ರಾಮದ ಮಹಿಳೆಯೊಬ್ಬರ ಚಿನ್ನದ ಸರ ಕಳವು ಕುರಿತು ಹರಿಹರಪುರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು, ಪ್ರವೀಣ್ ಎಂ.ಬಿ. ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಜಯಪುರ ಸಮೀಪದ ಕಟ್ಟೆಮನೆ ಲಾರೆನ್ಸ್ ಹೌಸ್ ನಿವಾಸಿಯಾಗಿದ್ದು, ಮೂಲತಃ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಮಾದಿಹಳ್ಳಿ ಗ್ರಾಮದವನಾಗಿದ್ದಾನೆ.

ಆರೋಪಿಯಿಂದ ಬೈಕ್, ಮೊಬೈಲ್ ಫೋನ್ ಸೇರಿದಂತೆ ₹4.83 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೃಂಗೇರಿ ಪೊಲೀಸ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್, ಪಿಎಸ್ಐ ನಾಗರಾಜ್ ಬಿ.ಆರ್., ಅಭಿಷೇಕ್, ಕೊಪ್ಪ ಪಿಎಸ್ಐ ಮಧು, ಹರಿಹರಪುರ ಪಿಎಸ್ಐ ಶ್ರೀಧರ್ ನಾಯ್ಕ ಹಾಗೂ ಸಿಬ್ಬಂದಿ ರಜಿತ್, ಪರಮೇಶ್, ಅಜಯ್ ಸಿಂಗ್, ಸದಾಶಿವ ಕಾರಜೋಳ, ಗಗನ್ ಕೆ.ಆರ್., ಪ್ರವೀಣ ನೆಲವಾಗಲ, ವಿಜಯಕುಮಾರ್ ಬಿಳಗಿ, ಪ್ರಶಾಂತ್, ಯುವರಾಜ, ಅಂಕಿತ, ಎಲ್ದೊ ಮತ್ತು ರಾಜೇಶ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-126-1146172770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.