ಕೊಪ್ಪ: ‘ಈಚೆಗೆ ತಾಲ್ಲೂಕಿನ ನಾರ್ವೆಯಲ್ಲಿನ ಚಂಡಿಕೇಶ್ವರಿ ಅಮ್ಮನವರ ಜಾತ್ರೆ ಸಂದರ್ಭದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದ್ದು, ಪೊಲೀಸರು ಕ್ರಮ ಜರುಗಿಸಲು ವಿಫಲರಾಗಿದ್ದಾರೆ’ ಎಂದು ಆರೋಪಿಸಿ, ತಾಲ್ಲೂಕು ಕಚೇರಿ ಎದುರು ಪ್ರತಿಭಟಿಸಿದ ದಲಿತಪರ ವಿವಿಧ ಸಂಘಟನೆ ಮುಖಂಡರು ಮಂಗಳವಾರ ತಹಶೀಲ್ದಾರ್ ಲಿಖಿತ ಮೋಹನ್ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಮುಖಂಡ ಆನಂದ ಬೆಳಗೊಳ ಮಾತನಾಡಿ, ‘ಚಂಡಿಕೇಶ್ವರಿ ದೇವಸ್ಥಾನ ಜಾತ್ರಾ ಮಹೋತ್ಸವದಲ್ಲಿ ಎಲ್ಲಾ ಸಮುದಾಯದವರು ಶ್ರದ್ಧಾಭಕ್ತಿಯಿಂದ ಪಾಲ್ಗೊಳ್ಳುತ್ತಾರೆ. ಈ ಸಂದರ್ಭದಲ್ಲಿ ಕಾರು ತಾಗಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಗಲಾಟೆಯಾಗಿದ್ದು, ಗುಂಪು ಕಟ್ಟಿಕೊಂಡು ಮನಬಂದಂತೆ ಹಲ್ಲೆ ನಡೆಸಲಾಗಿದೆ. ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡಿಲ್ಲ’ ಎಂದು ಆಕ್ಷೇಪಿಸಿದರು.

ಯಾರದ್ದೋ ಒತ್ತಡದಿಂದ ಪೊಲೀಸರು ಕ್ರಮ ಜರುಗಿಸಿಲ್ಲ. ಇಲಾಖೆಯವರು ಈ ಪ್ರಕರಣ ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಗಾಯಗೊಂಡ ಕಲ್ಮಕ್ಕಿ ಪುನೀತ್ ಮತ್ತಿತರರ ಮೇಲೆ ದರೋಡೆ ಪ್ರಕರಣ ದಾಖಲಿಸಿದ್ದು ದುರಂತ. ದೇವಸ್ಥಾನಕ್ಕೆ ಕೆಟ್ಟ ಹೆಸರು ತರಬಾರದು ಎಂದು ತಿಳಿ ಹೇಳಬೇಕಾದವರೇ ಗಲಾಟೆಗೆ ಪ್ರಚೋದನೆ ಕೊಟ್ಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಮಟ್ಟದ ದಲಿತ ದೌರ್ಜನ್ಯ ತಡೆ ಸಮಿತಿ ಸದಸ್ಯ ರಾಜಶಂಕರ್, ‘ಈ ಪ್ರಕರಣವನ್ನು ಜಿಲ್ಲಾ ಹಂತದ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಕೆಡಿಪಿ ಸಭೆಯಲ್ಲೂ ಪ್ರಸ್ತಾಪ ಮಾಡಿ, ನನ್ನ ಕೈಲಾದಷ್ಟು ಶ್ರಮ ಹಾಕಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು.

ಮುಖಂಡರಾದ ರವೀಂದ್ರ ಕವಡೆಕಟ್ಟೆ, ವಾಸಪ್ಪ ಕುಂಚೂರು ಹಾಗೂ ರತ್ನಾಕರ್ ಹೊಸ್ಮಕ್ಕಿ ಮಾತನಾಡಿದರು. ತೆಂಗಿನಮನೆ ಸುರೇಶ್ ಅಂಬೇಡ್ಕರ್ ಗೀತೆ ಹಾಡಿದರು. ಪ್ರಶಾಂತ್ ಹೊಸ್ಮಕ್ಕಿ, ಭೀಮ್ ಆರ್ಮಿಯ ಸುಧಾಕರ್, ಪ್ರಶಾಂತ್, ಪವನ್, ಭೀಮ್ ಆರ್ಮಿ ಸಂಘಟನೆಯ ಸುನಿಲ್, ಶಂಕರ್ ಊರುಗೊಡಿಗೆ, ರಮೇಶ್ ಮತ್ತಿತರ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-126-1373773437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.